alex Certify
ಕನ್ನಡ ದುನಿಯಾ       Mobile App
       

Kannada Duniya

ಉಗ್ರರ ದಾಳಿ ನಡುವೆಯೂ ಮುಂದುವರೆದ ಯಾತ್ರೆ

amarn-t

ಶ್ರೀನಗರ: ನಿಷೇಧಿತ ಲಷ್ಕರ್ ಎ ತೋಯ್ಬಾ ಸಂಘಟನೆಯ ಉಗ್ರರು ನಡೆಸಿದ ದಾಳಿಯಲ್ಲಿ, 7 ಅಮರನಾಥ ಯಾತ್ರಿಕರು ಸಾವನ್ನಪ್ಪಿದ್ದಾರೆ.

ಉಗ್ರರ ದಾಳಿಯ ನಡುವೆಯೂ ಬಿಗಿ ಭದ್ರತೆಯೊಂದಿಗೆ ಯಾತ್ರೆಯನ್ನು ಮುಂದುವರೆಸಲಾಗಿದೆ. ಗೃಹ ಇಲಾಖೆಯ ಉನ್ನತಾಧಿಕಾರಿಗಳ ಸಭೆ ನಡೆಸಲಾಗಿದೆ.

ಉಗ್ರರ ದಾಳಿಯ ಬಳಿಕ ಹೆಚ್ಚಿನ ಸಂಖ್ಯೆಯ ಯೋಧರನ್ನು ಯಾತ್ರಾರ್ಥಿಗಳ ಭದ್ರತೆಗೆ ನಿಯೋಜಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಎ.ಐ.ಸಿ.ಸಿ. ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಹಲವು ನಾಯಕರು ಯಾತ್ರಿಗಳ ಮೇಲೆ ದಾಳಿ ನಡೆಸಿರುವ ಉಗ್ರರ ಕೃತ್ಯವನ್ನು ಖಂಡಿಸಿದ್ದಾರೆ.

ಪ್ರಧಾನಿಯವರು ಘಟನೆಯ ಹೊಣೆಯನ್ನು ಹೊರಬೇಕು. ಭದ್ರತಾ ವೈಫಲ್ಯವೇ ಇದಕ್ಕೆ ಕಾರಣ ಎಂದು ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಟೀಕಿಸಿದ್ದಾರೆ.

ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಯಾತ್ರಾರ್ಥಿಗಳಿದ್ದ ಬಸ್ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಐವರು ಮಹಿಳೆಯರು ಸೇರಿ 7 ಮಂದಿ ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...