alex Certify
ಕನ್ನಡ ದುನಿಯಾ       Mobile App
       

Kannada Duniya

ಭೇಟಿ ಮರುದಿನವೇ ಅಮಿತ್ ಷಾಗೆ ಶಿವಸೇನೆ ಶಾಕ್

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಗದ್ದುಗೆಗೇರಲು ಕಾರ್ಯತಂತ್ರ ರೂಪಿಸುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಈ ಹಿನ್ನೆಲೆಯಲ್ಲಿ ಮಿತ್ರಪಕ್ಷಗಳೊಂದಿಗೆ ಮಾತುಕತೆಗೆ ಮುಂದಾಗಿದ್ದಾರೆ.

ಬಿಜೆಪಿಯ ಮಿತ್ರ ಪಕ್ಷವಾಗಿದ್ದ ಶಿವಸೇನೆ ಈಗ ಅಂತರ ಕಾಯ್ದುಕೊಳ್ಳುತ್ತಿದ್ದು, ಶಿವಸೇನಾ ನಾಯಕರು ಅವಕಾಶ ಸಿಕ್ಕಿದಾಗಲೆಲ್ಲ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸುತ್ತಿದ್ದಾರೆ.

ಹೀಗಾಗಿ ಶಿವಸೇನಾ ನಾಯಕರ ಮನವೊಲಿಕೆಗೆ ಮುಂದಾಗಿದ್ದ ಅಮಿತ್ ಶಾ, ಬುಧವಾರದಂದು ಉದ್ದವ್ ಠಾಕ್ರೆ ಅವರ ಮುಂಬೈನ ಬಾಂದ್ರಾದಲ್ಲಿರುವ ಮಾತೋಶ್ರೀ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದರು.

ಉದ್ದವ್ ಠಾಕ್ರೆಯೊಂದಿಗಿನ ಮಾತುಕತೆ ಸಂದರ್ಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಹ ಉಪಸ್ಥಿತರಿದ್ದು, ಬಿಜೆಪಿ ಜೊತೆ ಮೈತ್ರಿ ಮುಂದುವರಿಸಿಕೊಂಡು ಹೋಗುವಂತೆ ಅಮಿತ್ ಶಾ ಮನವಿ ಮಾಡಿದ್ದರು.

ಆದರೆ ಮಾತುಕತೆಯಾದ ಮರುದಿನವೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿರುವ ಶಿವಸೇನಾ ವಕ್ತಾರ ಸಂಜಯ್ ರಾವತ್, ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಲಿದೆ ಎಂದು ತಿಳಿಸಿದ್ದಾರೆ. ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಸದ್ಯದಲ್ಲೇ ಇದನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ ಎಂದು ಹೇಳಿದ್ದಾರೆ. ಶಿವಸೇನೆಯ ಈ ತೀರ್ಮಾನದಿಂದಾಗಿ ಅಮಿತ್ ಶಾ ಅವರ ಪ್ರಯತ್ನಕ್ಕೆ ಹಿನ್ನಡೆಯಾದಂತಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...