alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿಯವರ ಡಿಗ್ರಿ ಸರ್ಟಿಫಿಕೇಟ್ ಪ್ರದರ್ಶಿಸಿದ ಅಮಿತ್ ಶಾ

amit shaಕಳೆದ ಕೆಲ ದಿನಗಳಿಂದ ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪ್ರಮಾಣ ಪತ್ರ ಕುರಿತಂತೆ ಪದೇ ಪದೇ ಹೇಳಿಕೆ ನೀಡುತ್ತಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಉತ್ತರ ನೀಡಲೆಂಬಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನವದೆಹಲಿಯಲ್ಲಿ ಇಂದು ಪತ್ರಿಕಾಗೋಷ್ಟಿ ನಡೆಸಿ ನರೇಂದ್ರ ಮೋದಿಯವರ ಪದವಿ ಹಾಗೂ ಸ್ನಾತಕೋತ್ತರ ಪದವಿ ಪ್ರಮಾಣಪತ್ರವನ್ನು ಪ್ರದರ್ಶಿಸಿದ್ದಾರೆ.

ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಜೊತೆ ಪತ್ರಿಕಾಗೋಷ್ಟಿ ನಡೆಸಿದ ಅಮಿತ್ ಶಾ, ಅರವಿಂದ್ ಕೇಜ್ರಿವಾಲ್ ಅವರ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಸತ್ಯವನ್ನು ತಿಳಿದುಕೊಳ್ಳದೇ ಸುಳ್ಳು ಆರೋಪ ಮಾಡಿರುವ ಅರವಿಂದ್ ಕೇಜ್ರಿವಾಲ್, ಈಗ ದೇಶದ ಜನರ ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.

ಅರುಣ್ ಜೇಟ್ಲಿಯವರು ಮಾತನಾಡಿ, ತಾವು ಈ ಹಿಂದೆ ಎಬಿವಿಪಿ ಕಾರ್ಯಕರ್ತರಾಗಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿಯವರು ಪದವಿ ಪರೀಕ್ಷೆ ಬರೆಯಲು ನವದೆಹಲಿಗೆ ಆಗಮಿಸಿದ್ದರು. ಆ ಸಂದರ್ಭದಲ್ಲಿ ಎಬಿವಿಪಿ ಕಛೇರಿಯಲ್ಲಿ ತಂಗಿದ್ದರೆಂಬುದನ್ನು ಸ್ಮರಿಸಿಕೊಂಡರಲ್ಲದೇ, ಆಮ್ ಆದ್ಮಿ ಪಕ್ಷದಲ್ಲೇ ನಕಲಿ ಪದವಿ ಪತ್ರ ಹೊಂದಿದವರು ಸಿಕ್ಕಿ ಬಿದ್ದಿದ್ದು, ಆದರೆ ಮೋದಿಯವರು ಪದವಿ ಪಡೆದಿದ್ದರೂ ಅದನ್ನು ನಕಲಿ ಎಂದು ಹೇಳುವ ಮೂಲಕ ಅರವಿಂದ್ ಕೇಜ್ರಿವಾಲ್ ಕೀಳು ಮಟ್ಟದ ಪ್ರಚಾರ ಪಡೆಯುತ್ತಿದ್ದಾರೆಂದು ಟೀಕಿಸಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...