alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಸೇನೆ ನಾಯಕರ ಮನವೊಲಿಸಲು ಯಶಸ್ವಿಯಾಗ್ತಾರಾ ಅಮಿತ್ ಶಾ?

ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಬಿಜೆಪಿ, ಕಮಲ ಅರಳಿಸಲು ದಿನಕ್ಕೊಂದು ಗೇಮ್ ಪ್ಲಾನ್ ಮಾಡುತ್ತಿದೆ. ಇದರ ಭಾಗವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ಭೇಟಿ ಮಾಡಿದ್ದಾರೆ. ಇವರಿಗೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಸಾಥ್ ನೀಡಿದ್ದಾರೆ.

ಕಳೆದ ಎರಡು ದಿನಗಳ ಹಿಂದೆಯಷ್ಟೇ, ಪ್ರಧಾನಿ ಮೋದಿ ಹಾಗೂ ಅಮಿತ್ ಶಾ, ಬಿಜೆಪಿ ಹಿರಿಯ ಮುಖಂಡ ಎಲ್.ಕೆ. ಅಡ್ವಾಣಿ ಮತ್ತು ಡಾ. ಮುರಳಿ ಮನೋಹರ್ ಜೋಶಿ ಅವರನ್ನು ಭೇಟಿ ಮಾಡಿದ್ದು, ಈ ಬಾರಿಯ ಚುನಾವಣಾ ಅಖಾಡದಲ್ಲಿ ಕಣಕ್ಕಿಳಿಯಬೇಕು ಎಂದು ಮನವಿ ಮಾಡಿಕೊಂಡಿದ್ದರು. ಇದೀಗ ಶಿವಸೇನೆಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ.

ಇತ್ತೀಚೆಗಷ್ಟೆ ಶಿವಸೇನೆ, ಬಿಜೆಪಿ ಪಾಳೆಯದಿಂದ ಹೊರಬರುವ ಸೂಚನೆ ನೀಡಿತ್ತು. ಅಷ್ಟೆ ಅಲ್ಲ, ಬಿಜೆಪಿ ತನ್ನ ದೊಡ್ಡ ಶತ್ರು ಅನ್ನುವ ಹೇಳಿಕೆಯನ್ನು ಶಿವಸೇನಾ ನಾಯಕರು ಬಹಿರಂಗವಾಗಿಯೇ ನೀಡಿದ್ದರು. ಅದನ್ನು ಪರಿಗಣಿಸಿ ಚಾಣಕ್ಯ ಅಮಿತ್ ಶಾ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆಯೊಂದಿಗೆ ಮಾತುಕತೆ ನಡೆಸಲು ಮುಂದಾಗಿದ್ದಾರೆ. ಮುಂದಿನ ದಿನಗಳಲ್ಲಿ ಅಮಿತ್ ಶಾ ಗೇಮ್ ಪ್ಲಾನ್ ವರ್ಕೌಟ್ ಆಗಲಿದೆಯಾ…? ಅಥವಾ ಶಿವಸೇನೆ ಕಮಲದೊಂದಿಗಿನ ಮೈತ್ರಿ ಕಡಿದುಕೊಳ್ಳುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...