alex Certify
ಕನ್ನಡ ದುನಿಯಾ       Mobile App
       

Kannada Duniya

ಫೇಸ್ ಬುಕ್ ನಲ್ಲಿ ಜನಪ್ರಿಯತೆ ಗಳಿಸಿದರೆ ಬಿಜೆಪಿ ಟಿಕೆಟ್ !

NEW DELHI, INDIA - MAY 24: BJP Presidnet Amit Shah poses for a profile shoot on May 24, 2015 in New Delhi, India. (Photo by Pradeep Gaur/Mint via Getty Images)

ಪಂಚರಾಜ್ಯ ಚುನಾವಣೆ ಹತ್ತಿರವಾಗುತ್ತಿದ್ದು, ಈ ನಡುವೆ ಉತ್ತರ ಪ್ರದೇಶದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಗೆಲ್ಲಿಸುವ ನಿಟ್ಟಿನಲ್ಲಿ ತಂತ್ರ ರೂಪಿಸುತ್ತಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಟಿಕೆಟ್ ನೀಡಲು ಅಭ್ಯರ್ಥಿಗಳಿಗೆ ಫೇಸ್ ಬುಕ್ ಜನಪ್ರಿಯತೆಯನ್ನೇ ಮಾನದಂಡವಾಗಿಸಲು ನಿರ್ಧರಿಸಿದ್ದಾರೆ.

ಹೌದು. ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಾಗಲೇ ಗೆಲ್ಲುವ ಕುದುರೆಗಳ ಆಯ್ಕೆಗೆ ಮುಂದಾಗಿರುವ ಬಿಜೆಪಿ, ಪಕ್ಷದಿಂದ ಟಿಕೆಟ್ ಆಕಾಂಕ್ಷಿಗಳು ಫೇಸ್‌ ಬುಕ್‌, ಟ್ವಿಟರ್‌ ಗಳಲ್ಲಿ 25 ಸಾವಿರ ಲೈಕ್ಸ್‌, ಅಷ್ಟೇ ಸಂಖ್ಯೆಯ ಫಾಲೋವರ್‌ ಗಳನ್ನು ಹೊಂದಿರಬೇಕು ಎಂಬ ಸೂಚನೆ ರವಾನಿಸಿದೆ ಎನ್ನಲಾಗಿದೆ.

ಅಮಿತ್ ಶಾ ಅವರೇ ಈ ರೀತಿಯ ಕಾರ್ಯತಂತ್ರ ರೂಪಿಸಿದ್ದಾರೆ ಎನ್ನಲಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಜನಪ್ರಿಯತೆ ಗಳಿಸಿದಲ್ಲಿ ಗೆಲುವು ಸುಲಭವಾಗುತ್ತದೆ ಎಂಬುದು ಅವರ ವಾದ. ಆದರೆ ಇದಕ್ಕೆ ಕೆಲವರ ವಿರೋಧವೂ ವ್ಯಕ್ತವಾಗುತ್ತಿದ್ದು, ಒಟ್ಟಾರೆ ಬಿಜೆಪಿ ಟಿಕೆಟ್ ಪಡೆಯಲು ಅದೆಷ್ಟು ಆಕಾಂಕ್ಷಿಗಳು ಫೇಸ್ ಬುಕ್ ಅಕೌಂಟ್ ಮಾಡಿದ್ದಾರೆಯೋ ಗೊತ್ತಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...