alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಜೆಪಿಗೆ ಶಾಕ್ ಕೊಟ್ಟ ಉತ್ತರ ಪ್ರದೇಶ ಸಂಸದೆ

ಉತ್ತರ ಪ್ರದೇಶದ ಆಲಿಘರ್ ಮುಸ್ಲಿಂ ಯೂನಿವರ್ಸಿಟಿಯಲ್ಲಿ ಪಾಕಿಸ್ತಾನದ ಸಂಸ್ಥಾಪಕ ಮೊಹಮ್ಮದ್ ಆಲಿ ಜಿನ್ನಾರವರ ಭಾವಚಿತ್ರ ಹಾಕಿರುವುದಕ್ಕೆ ಕೆಲ ಬಿಜೆಪಿ ನಾಯಕರು ಅಪಸ್ವರ ಎತ್ತಿರುವುದರ ಮಧ್ಯೆ ಬಹ್ರೈಚ್ ಕ್ಷೇತ್ರದ ಸಂಸದೆ ಸಾವಿತ್ರಿ ಬಾಯಿ ಫುಲೆ, ಮೊಹಮ್ಮದ್ ಆಲಿ ಜಿನ್ನಾ ಒಬ್ಬ ಮಹಾಪುರುಷ ಎಂದು ಹೇಳುವ ಮೂಲಕ ಸ್ವಪಕ್ಷೀಯರಿಗೆ ಶಾಕ್ ನೀಡಿದ್ದಾರೆ.

ಈ ಹಿಂದೆಯೂ ಕೇಂದ್ರ ಹಾಗೂ ಉತ್ತರ ಪ್ರದೇಶ ರಾಜ್ಯ ಸರ್ಕಾರವನ್ನು ಟೀಕಿಸಿ ಬಿಜೆಪಿಗೆ ಮುಜುಗರ ತಂದಿದ್ದ ಸಾವಿತ್ರಿ ಬಾಯಿ ಫುಲೆ, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ, ಭಾರತ ವಿಭಜನೆಗೂ ಮುನ್ನ ಮೊಹಮ್ಮದ್ ಆಲಿ ಜಿನ್ನಾ ಕೂಡಾ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದಾರೆ. ಅವರ ಭಾವಚಿತ್ರ ಹಾಕಿದರೆ ತಪ್ಪೇನು ಎಂದು ಪ್ರಶ್ನಿಸಿದ್ದಾರೆ.

ಸಂಸದೆ ಸಾವಿತ್ರಿ ಬಾಯಿ ಫುಲೆ, ಈ ಹಿಂದೆಯೂ ದಲಿತರ ಮನೆಯಲ್ಲಿ ಪಕ್ಷದ ಕೆಲ ನಾಯಕರು ಭೋಜನ ಮಾಡಿ ಪ್ರಚಾರ ಗಿಟ್ಟಿಸಿಕೊಳ್ಳುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರಲ್ಲದೇ ಇದರಿಂದ ದಲಿತರ ಪರಿಸ್ಥಿತಿಯೇನೂ ಬದಲಾಗುವುದಿಲ್ಲವೆಂದು ಕಟಕಿಯಾಡಿದ್ದರು. ಇದೀಗ ಮತ್ತೊಮ್ಮೆ ಮೊಹಮ್ಮದ್ ಆಲಿ ಜಿನ್ನಾ ಭಾವಚಿತ್ರ ವಿವಾದ ಕುರಿತಂತೆ ಪಕ್ಷದ ನಾಯಕರ ಹೇಳಿಕೆಗೆ ತಿರುಗೇಟು ನೀಡುವ ಮೂಲಕ ಶಾಕ್ ಕೊಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...