alex Certify
ಕನ್ನಡ ದುನಿಯಾ       Mobile App
       

Kannada Duniya

ಉಗ್ರರ ವಿರುದ್ದ ಕಾರ್ಯಾಚರಣೆಗಿಳಿದ ಸೇನೆ

ಶ್ರೀನಗರ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಕೊಕೆರ್ ನಾಗ್ ನಲ್ಲಿ ಕಾರ್ಯಾಚರಣೆಗಿಳಿದಿರುವ ಸೇನೆ ಈ ಪ್ರದೇಶದಲ್ಲಿ ಅಡಗಿ ಕುಳಿತಿರುವ ಮೂವರು ಉಗ್ರರಿಗಾಗಿ ಶೋಧ ಕಾರ್ಯ ನಡೆಸಿದೆ.

ಈಗಾಗಲೇ ಭಾರತೀಯ ಸೇನೆ ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ಆರಂಭವಾಗಿದ್ದು, ಉಗ್ರರ ನಾಲ್ಕು ಅಡಗುದಾಣಗಳಲ್ಲಿ ಸೇನೆ ಎರಡನ್ನು ಧ್ವಂಸಗೊಳಿಸಿದೆ. ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ನಡುವೆ ಬಾರಾಮುಲ್ಲಾ ಅರಣ್ಯಾಧಿಕಾರಿ ಅಹ್ಮದ್ ಮಲಿಕ್ ಮೇಲೆ ಗುಂಡಿನ ದಾಳಿ ನಡೆಸಿರುವ ಉಗ್ರರು, ಅಧಿಕಾರಿಯನ್ನು ಹತ್ಯೆಗೈದಿದ್ದಾರೆ. ಈ ಸಂಬಂಧ ಎಲ್.ಇ.ಟಿ. ಉಗ್ರ ಯೂಸುಫ್​ ನನ್ನು ಪೊಲೀಸರು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...