alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಮಾತನಾಡುವಾಗಲೇ ಮೊಬೈಲ್ ಬ್ಲಾಸ್ಟ್ ಆಗಿ ಸಾವನ್ನಪ್ಪಿದ ಯುವಕ

ಆಂಧ್ರ ಪ್ರದೇಶದಲ್ಲೊಂದು ದಾರುಣ ಘಟನೆ ನಡೆದಿದೆ. ಯುವಕನೊಬ್ಬ ಮೊಬೈಲನ್ನು ಚಾರ್ಜ್ ಮಾಡಲು ಹಾಕಿ ಮಾತನಾಡುವಾಗಲೇ ಬ್ಲಾಸ್ಟ್ ಆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಪ್ರಕಾಶಂ ಜಿಲ್ಲೆಯ ಒಂಗೋಲ್ ನಗರ ಸಮೀಪದ ವಾಗುಪಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಂಗು ಮಸ್ತಾನ್ ರೆಡ್ಡಿ ಎಂಬಾತ ಸಾವನ್ನಪ್ಪಿದ ದುರ್ದೈವಿಯಾಗಿದ್ದಾನೆ.

ತಂದೆ ತಾಯಿ ನಿಧನದ ಬಳಿಕ ಒಬ್ಬಂಟಿಯಾಗಿ ಮನೆಯಲ್ಲಿ ವಾಸಿಸುತ್ತಿದ್ದ ಮಸ್ತಾನ್ ರೆಡ್ಡಿ ತನ್ನ ಮೊಬೈಲನ್ನು ಚಾರ್ಜ್ ಮಾಡಲು ಹಾಕಿದ್ದು, ಕರೆ ಬಂದ ಹಿನ್ನೆಲೆಯಲ್ಲಿ ಅದನ್ನು ಸ್ವೀಕರಿಸಿ ಮಾತನಾಡಲು ಮುಂದಾಗಿದ್ದಾನೆ.

ಈ ವೇಳೆ ಅತ್ಯಧಿಕ ವಿದ್ಯುತ್ ಪ್ರವಹಿಸಿದ ಕಾರಣ ಮೊಬೈಲ್ ಬ್ಲಾಸ್ಟ್ ಆಗಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈತನ ಮನೆಯಿಂದ ಸುಟ್ಟ ವಾಸನೆ ಬರುತ್ತಿದ್ದ ಕಾರಣ ಪಕ್ಕದ ಮನೆಯವರು ಬಂದು ನೋಡಿದಾಗಲೇ ಘಟನೆ ಬೆಳಕಿಗೆ ಬಂದಿದೆ. ಮಸ್ತಾನ್ ರೆಡ್ಡಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಈಗಾಗಲೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಶವದ ಮರಣೋತ್ತರ ಪರೀಕ್ಷೆ ಬಳಿಕ ಪೊಲೀಸರು ಸಂಬಂಧಿಕರ ವಶಕ್ಕೆ ಒಪ್ಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...