alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಸಭಾ ಚುನಾವಣೆ ಜೊತೆಗೆ ನಡೆಯಲಿದೆಯಾ ‘ಪಂಚ ರಾಜ್ಯ’ಗಳ ವಿಧಾನಸಭಾ ಚುನಾವಣೆ…?

ಮುಂಬರುವ ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳು ಭರ್ಜರಿ ಸಿದ್ಧತೆ ನಡೆಸುತ್ತಿರುವ ಮಧ್ಯೆ ಚುನಾವಣಾ ಆಯೋಗ, ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೂ ನಿರ್ಧರಿಸಿದೆ ಎನ್ನಲಾಗುತ್ತಿದ್ದು, ಒಂದೊಮ್ಮೆ ಇದಕ್ಕೆ ದಿನಾಂಕ ನಿಗದಿಪಡಿಸಿದರೆ ಚುನಾವಣಾ ಕಣ ಮತ್ತಷ್ಟು ರಂಗೇರಲಿದೆ.

2019 ರಲ್ಲಿ ಲೋಕಸಭಾ ಚುನಾವಣೆ ನಡೆಯಲಿದ್ದು, ಇದೇ ಅವಧಿಯಲ್ಲಿ ಆಂಧ್ರ ಪ್ರದೇಶ, ಒಡಿಶಾ, ಸಿಕ್ಕಿಂ, ಅರುಣಾಚಲ ಪ್ರದೇಶದ ವಿಧಾನ ಸಭೆಗಳ ಅವಧಿಯೂ ಪೂರ್ಣಗೊಳ್ಳಲಿದೆ. ಜೊತೆಗೆ ಜಮ್ಮು ಕಾಶ್ಮೀರ ವಿಧಾನಸಭೆ ವಿಸರ್ಜನೆಯಾಗಿದ್ದು, 6 ತಿಂಗಳೊಳಗಾಗಿ ಚುನಾವಣೆ ನಡೆಸಬೇಕಾದ ಅನಿವಾರ್ಯತೆ ಇದೆ.

ಹೀಗಾಗಿ ಚುನಾವಣಾ ಆಯೋಗ ಲೋಕಸಭಾ ಚುನಾವಣೆಯ ಜೊತೆಗೆ ಈ ಪಂಚ ರಾಜ್ಯಗಳ ಚುನಾವಣೆ ನಡೆಸಲು ನಿರ್ಧರಿಸಿದೆ ಎನ್ನಲಾಗಿದೆ. ಇದರಿಂದಾಗಿ ಹಣ ಉಳಿಕೆಯಾಗುವುದರ ಜೊತೆಗೆ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲು ಅನುಕೂಲವಾಗುತ್ತದೆಂಬ ಇರಾದೆ ಚುನಾವಣಾ ಆಯೋಗದ್ದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...