alex Certify
ಕನ್ನಡ ದುನಿಯಾ       Mobile App
       

Kannada Duniya

ನಿರುದ್ಯೋಗಿ ಯುವಕರಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ…!

ಲೋಕಸಭಾ ಚುನಾವಣೆ ಸಮೀಪಿಸುತ್ತಿರುವಂತೆಯೇ ರಾಜಕೀಯ ಪಕ್ಷಗಳು ಭರಪೂರ ಆಶ್ವಾಸನೆಗಳನ್ನು ನೀಡುತ್ತಿವೆ. ಲೋಕಸಭೆ ಜೊತೆಗೆ ವಿಧಾನಸಭಾ ಚುನಾವಣೆಯನ್ನೂ ಎದುರಿಸಲು ಸಿದ್ಧತೆ ನಡೆಸಿರುವ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರ ಪ್ರದೇಶ ಸರ್ಕಾರ ಇನ್ನೂ ಒಂದು ಹೆಜ್ಜೆ ಮುಂದು ಹೋಗಿದ್ದು, ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆ ನೀಡಲು ನಿರ್ಧರಿಸಿದೆ.

ಅಮರಾವತಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದ್ದು, ‘ಮುಖ್ಯಮಂತ್ರಿ ಯುವ ನೇಸ್ತಂ’ ಯೋಜನೆಯಡಿ 22 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕರಿಗೆ ಪ್ರತಿ ತಿಂಗಳು ಒಂದು ಸಾವಿರ ರೂ. ಭತ್ಯೆ ನೀಡಲು ತೀರ್ಮಾನಿಸಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಸಚಿವ ನಾರಾ ಲೋಕೇಶ್ ಮಾಧ್ಯಮ ಪ್ರತಿನಿಧಿಗಳಿಗೆ ಈ ಕುರಿತು ಮಾಹಿತಿ ನೀಡಿದ್ದು, ‘ಮುಖ್ಯಮಂತ್ರಿ ಯುವ ನೇಸ್ತಂ’ ಯೋಜನೆಯಡಿ ನಿರುದ್ಯೋಗಿಗಳ ನೋಂದಾವಣಿ ಪ್ರಕ್ರಿಯೆ ಆಗಸ್ಟ್ ಮಧ್ಯ ಭಾಗದಿಂದ ಆರಂಭವಾಗಲಿದ್ದು, ರಾಜ್ಯದ 12 ಲಕ್ಷ ಮಂದಿ ಇದರ ಪ್ರಯೋಜನ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.

ಈ ಯೋಜನೆ ಸಂಪೂರ್ಣ ಪಾರದರ್ಶಕವಾಗಿರಲಿದ್ದು, ಕುಟುಂಬವೊಂದರಲ್ಲಿ ಒಂದಕ್ಕಿಂತ ಅಧಿಕ ಮಂದಿ ನಿರುದ್ಯೋಗಿಗಳಿದ್ದರೆ ಅವರೆಲ್ಲರೂ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ನಿರುದ್ಯೋಗಿಗಳಿಗೆ ಮಾಸಿಕ ಭತ್ಯೆ ಮಾತ್ರವಲ್ಲ ಸೂಕ್ತ ತರಬೇತಿಯನ್ನೂ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...