alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಗಾಗಿ ಕಾಯುವಾಗ ದುರಂತ: ಲಾರಿ ಹರಿದು ಐವರು ಸ್ಥಳದಲ್ಲೇ ಸಾವು

ಚಿತ್ತೂರು: ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಪಿಲೇರು ಬಳಿ, ಲಾರಿ ಹರಿದು ಐವರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ರಸ್ತೆ ಪಕ್ಕದಲ್ಲಿ ಬಸ್ ಗಾಗಿ ಕಾಯುತ್ತಿದ್ದ ಜನರ ಮೇಲೆ ಅತಿವೇಗವಾಗಿ ಬಂದ ಲಾರಿ ಹರಿದು ಈ ದುರ್ಘಟನೆ ಸಂಭವಿಸಿದೆ. ಜನರ ಮೇಲೆ ನುಗ್ಗಿದ ಲಾರಿ ಬಳಿಕ ಕಾರೊಂದಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದಾನೆ.

ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ತಿರುಪತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...