alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಂದ್ರ ಬಜೆಟ್ ವಿರೋಧಿಸಿ ಆಂಧ್ರಪ್ರದೇಶ ಬಂದ್

ಆಂಧ್ರ ಪ್ರದೇಶದಲ್ಲಿಂದು ಎಡಪಕ್ಷಗಳು ಬಂದ್ ಗೆ ಕರೆಕೊಟ್ಟಿವೆ. 2018-19ನೇ ಸಾಲಿನ ಕೇಂದ್ರ ಬಜೆಟ್ ವಿರೋಧಿಸಿ ಬಂದ್ ಆಚರಿಸಲಾಗ್ತಿದೆ. ಸಿಪಿಐ, ಸಿಪಿಐ-ಎಂ ಜೊತೆಗೆ ಇನ್ನೂ ಹಲವು ಪಕ್ಷಗಳು ಬಂದ್ ಗೆ ಕೈಜೋಡಿಸಿವೆ. ವೈ ಎಸ್ ಆರ್ ಕಾಂಗ್ರೆಸ್ ಹಾಗೂ ಕಾಂಗ್ರೆಸ್ ಕೂಡ ಬೆಂಬಲ ವ್ಯಕ್ತಪಡಿಸಿವೆ.

ಇನ್ನೊಂದೆಡೆ ರಾಜ್ಯಕ್ಕೆ ನ್ಯಾಯ ಒದಗಿಸುವಂತೆ ಸಂಸತ್ತಿನಲ್ಲಿ ಗದ್ದಲ ಎಬ್ಬಿಸುತ್ತಿರುವ ಪಕ್ಷದ ಸಂಸದರನ್ನು ಬೆಂಬಲಿಸಿ ಆಡಳಿತಾರೂಢ ಟಿಡಿಪಿ ಕೂಡ ಪ್ರತಿಭಟನೆ ನಡೆಸುತ್ತಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಬಂದ್ ಹಿನ್ನೆಲೆಯಲ್ಲಿ ಭದ್ರತೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಶಾಖಪಟ್ಟಣಂನಲ್ಲಿ ಎಡಪಕ್ಷಗಳು 1300ಕ್ಕೂ ಅಧಿಕ ಬಸ್ ಗಳನ್ನು ತಡೆದು ಪ್ರತಿಭಟಿಸಿದ್ದಾರೆ. ಬಜೆಟ್ ಮಂಡನೆಯಾದಾಗಿನಿಂದ್ಲೂ ಟಿಡಿಪಿ ಸಂಸದರು ಸಂಸತ್ ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗಿದ್ದಾರೆ.

ಆಂಧ್ರಕ್ಕೆ ಪ್ರತ್ಯೇಕ ಅನುದಾನ ಘೋಷಣೆ ಮಾಡುವವರೆಗೂ ಪ್ರತಿಭಟನೆ ಮುಂದುವರಿಯಲಿದೆ ಅಂತಾ ಸಿಎಂ ಚಂದ್ರಬಾಬು ನಾಯ್ಡು ಸ್ಪಷ್ಟಪಡಿಸಿದ್ದಾರೆ. ಫೋನ್ ಮೂಲಕ ನಾಯ್ಡು ಅವರೊಂದಿಗೆ ಮಾತನಾಡಿದ ಅನಂತ್ ಕುಮಾರ್, ಮನವೊಲಿಸಲು ಮಾಡಿದ ಪ್ರಯತ್ನವೂ ವಿಫಲವಾಗಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...