alex Certify
ಕನ್ನಡ ದುನಿಯಾ       Mobile App
       

Kannada Duniya

ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಲಾಠಿ ಚಾರ್ಜ್

ಲಖ್ನೋ: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.

ಪೊಲೀಸರು ಪ್ರತಿಭಟನಾಕಾರರನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ಇದರಿಂದಾಗಿ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಅಂಗನವಾಡಿ ಕಾರ್ಯಕರ್ತೆಯರನ್ನು ಬಂಧಿಸಲಾಗಿದೆ.

ಸಾವಿರಾರು ಸಂಖ್ಯೆಯಲ್ಲಿದ್ದ ಅಂಗನವಾಡಿ ಕಾರ್ಯಕರ್ತೆಯರು ಲಖ್ನೋದ ವಿಧಾನಸೌಧ ಮತ್ತು ರಾಜಭವನ ರಸ್ತೆಯಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾಗಿದ್ದಾರೆ.

ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಆಗಿ ಕಿಲೋಮೀಟರ್ ಗಟ್ಟಲೇ ವಾಹನಗಳು ಸಾಲುಗಟ್ಟಿ ನಿಂತಿವೆ. ಪೊಲೀಸರು, ಪ್ರತಿಭಟನಾಕಾರರನ್ನು ಚದುರಿಸಲು ಮುಂದಾದಾಗ, ಅಂಗನವಾಡಿ ಕಾರ್ಯಕರ್ತೆಯರು ಪೊಲೀಸರೊಂದಿಗೆ ವಾಗ್ವಾದ ನಡೆಸಿ, ಘರ್ಷಣೆಗೆ ಇಳಿದಿದ್ದಾರೆ. ಆಗ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಪ್ರತಿಭಟನಾಕಾರರನ್ನು ಚದುರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...