alex Certify
ಕನ್ನಡ ದುನಿಯಾ       Mobile App
       

Kannada Duniya

ತೆಲಂಗಾಣ ಮುಖ್ಯಮಂತ್ರಿಗೆ ಜೀವ ಬೆದರಿಕೆ ಕರೆ

trs-president-chandrasekhar

ತೆಲಂಗಾಣದ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರಿಗೆ ಅನಾಮಧೇಯ ವ್ಯಕ್ತಿಯೊಬ್ಬ ಜೀವ ಬೆದರಿಕೆ ಕರೆ ಮಾಡಿರುವ ಘಟನೆ ನಡೆದಿದೆ.

ಚಂದ್ರಶೇಖರ್ ರಾವ್ ಅವರು ಸದ್ಯದಲ್ಲಿಯೇ ಕರೀಂ ನಗರಕ್ಕೆ ಭೇಟಿ ನೀಡಲಿದ್ದು, ಈ ಸಮಯದಲ್ಲಿ ಅವರನ್ನು ಹತ್ಯೆ ಮಾಡುವುದಾಗಿ ಕರೆ ಮಾಡಿದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ನಿನ್ನೆ ಸಂಜೆ 6 ಗಂಟೆ ಸಮಯದಲ್ಲಿ ಕೊರುಟ್ಲಾದ ಶಾಸಕ ಕಲ್ವಕುಂಟ್ಲಾ ವಿದ್ಯಾಸಾಗರ್ ರಾವ್ ಅವರ ಮೊಬೈಲ್ ಗೆ ಈ ಬೆದರಿಕೆ ಕರೆ ಬಂದಿದ್ದು, ತಕ್ಷಣ ವಿದ್ಯಾಸಾಗರ್ ರಾವ್ ಅವರು ವಿಚಾರವನ್ನು ಮುಖ್ಯಮಂತ್ರಿಯವರಿಗೆ ತಿಳಿಸಿ ಬಳಿಕ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದಾರೆ.

ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಈಗಾಗಲೇ ಅನಾಮಧೇಯ ವ್ಯಕ್ತಿಯ ಪತ್ತೆಗೆ ಮುಂದಾಗಿದ್ದು, ಮುಖ್ಯಮಂತ್ರಿಗಳ ಭದ್ರತೆಯನ್ನೂ ಸಹ ಹೆಚ್ಚಿಸಲಾಗಿದೆ ಎಂಬ ಮಾಹಿತಿ ಲಭಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...