alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕಷ್ಟದ ಸುಳಿಯಲ್ಲಿ ಬಿಹಾರದ ಮತ್ತೊಬ್ಬ ಮಾಜಿ ಮಂತ್ರಿ

ಬಿಹಾರದ ಎನ್ಜಿಒ ಒಂದರಲ್ಲಿನ 34 ಮಂದಿ ಯುವತಿಯರ ಮೇಲೆ ನಡೆದ ಅತ್ಯಾಚಾರದ ಪ್ರಕರಣದಿಂದ ಮುಜುಗರಕ್ಕೊಳಗಾಗಿರುವ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಸರ್ಕಾರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದೆ.

ಜೆಡಿಯುನ ಮಾಜಿ ಮಂತ್ರಿ ದಾಮೋದರ್ ರಾವುತ್ ಕೂಡ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಅಂತ ಹೇಳಲಾಗ್ತಿದೆ. ಈ ಪ್ರಕರಣದಲ್ಲಿ ದಾಮೋದರ್ ರಾವುತ್ ಅವರನ್ನು ವಿಚಾರಣೆಗೆ ಒಳಪಡಿಸಲು ಸಿಬಿಐ ನಿರ್ಧರಿಸಿದೆ. ಈಗಾಗ್ಲೇ ಸಿಬಿಐ ಅಧಿಕಾರಿಗಳು ಮೊದಲ ಹಂತದ ವಿಚಾರಣೆಯನ್ನ ಮುಗಿಸಿದ್ದು ಮತ್ತೊಮ್ಮೆ ದಾಮೋದರ್ ಅವರನ್ನ ವಿಚಾರಣೆಗೆ ಒಳಪಡಿಸಲು ನಿರ್ಧರಿಸಿದೆ.

ದಾಮೋದರ್ ರಾವುತ್ ಅವರ ಪುತ್ರ, ಪ್ರಕರಣದ ಮುಖ್ಯ ಆರೋಪಿಯಾಗಿರುವ ಬ್ರಜೇಶ್ ಠಾಕೂರ್ ಜೊತೆ ಆತ್ಮೀಯ ಸಂಬಂಧ ಹೊಂದಿದ್ದ ಕಾರಣ ಯುವ ಘಟಕದ ಸ್ಥಾನದಿಂದ ವಜಾಗೊಂಡಿದ್ದಾರೆ. ನಿತೀಶ್ ಮೊದಲ ಅವಧಿಯಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ದಾಮೋದರ್ ಸಮಾಜ ಕಲ್ಯಾಣ ಸಚಿವರಾಗಿ ಕೆಲಸ ಮಾಡಿದ್ದರು.

ಈಗಾಗ್ಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಮಂಜು ವರ್ಮಾ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಪ್ರಕರಣದ ವಿಚಾರಣೆ ತೀವ್ರಗೊಳ್ಳುತ್ತಿರುವ ಹಿನ್ನಲೆಯಲ್ಲಿ ನಿತೀಶ್ ಸರ್ಕಾರದ ಮತ್ತಷ್ಟು ಪ್ರಮುಖರ ತಲೆದಂಡವಾಗುವ ಸಾಧ್ಯತೆಗಳಿವೆ ಅಂತ ಹೇಳಲಾಗ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...