alex Certify
ಕನ್ನಡ ದುನಿಯಾ       Mobile App
       

Kannada Duniya

ಭ್ರಷ್ಟಾಚಾರ ನಿಗ್ರಹ ದಳದಿಂದ ಕೇಜ್ರಿವಾಲ್ ಸಂಬಂಧಿ ಅರೆಸ್ಟ್

ದೆಹಲಿಯ ಲೋಕೋಪಯೋಗಿ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಸಂಬಂಧಿ ವಿನಯ್ ಕುಮಾರ್ ಬನ್ಸಾಲ್ ಎಂಬವರನ್ನು ಬಂಧಿಸಿದ್ದಾರೆ.

ರಾಹುಲ್ ಶರ್ಮಾ ಎಂಬವರು ಸಲ್ಲಿಸಿದ್ದ ದೂರಿನ ಹಿನ್ನಲೆಯಲ್ಲಿ ವಿಚಾರಣೆ ನಡೆಸಿದ್ದ ಭ್ರಷ್ಟಾಚಾರ ನಿಗ್ರಹ ದಳ, ಲೋಕೋಪಯೋಗಿ ಇಲಾಖೆಯಿಂದ ಬಿಲ್ ಪಡೆಯುವ ವೇಳೆ ಅಸ್ತಿತ್ವದಲ್ಲೇ ಇಲ್ಲದ ಕಂಪನಿಯೊಂದರಿಂದ ವಸ್ತುಗಳನ್ನು ಖರೀದಿಸಿದ್ದಾಗಿ ವಿನಯ್ ಕುಮಾರ್ ಬನ್ಸಾಲ್ ಮಾಹಿತಿ ನೀಡಿರುವುದು ಮೇಲ್ನೋಟಕ್ಕೆ ಸಾಬೀತಾದ ಕಾರಣ ಇಂದು ಬೆಳಿಗ್ಗೆ ಅವರನ್ನು ವಶಕ್ಕೆ ಪಡೆಯಲಾಗಿದೆ.

ಹಲವು ಕಾಮಗಾರಿಗಳ ಗುತ್ತಿಗೆ ಪಡೆದಿದ್ದ ವಿನಯ್ ಕುಮಾರ್ ಬನ್ಸಾಲ್ ಮಾಲೀಕತ್ವದ ಕಂಪನಿ, ಕೆಲಸ ಪೂರ್ಣಗೊಳಿಸದಿದ್ದರೂ ಸುಳ್ಳು ಮಾಹಿತಿ ನೀಡಿ ಬಿಲ್ ಪಡೆದುಕೊಂಡಿದ್ದಾರೆಂದು ರಾಹುಲ್ ಶರ್ಮಾ ಆರೋಪಿಸಿದ್ದರಲ್ಲದೇ ಈ ಕುರಿತು ದೂರು ದಾಖಲಿಸಿದ್ದರು. ಇದೀಗ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರ ಹತ್ತಿರದ ಸಂಬಂಧಿಯ ಬಂಧನವಾಗಿರುವುದು ಕುತೂಹಲಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...