alex Certify
ಕನ್ನಡ ದುನಿಯಾ       Mobile App
       

Kannada Duniya

ಜಮ್ಮು, ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ

indian-army ag17

ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ ದುಷ್ಕೃತ್ಯವನ್ನು ಮುಂದುವರೆಸಿರುವ ಉಗ್ರರು, ನಿರಂತರವಾಗಿ ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದಾರೆ. ಬಾರಾಮುಲ್ಲಾದಲ್ಲಿ ಸೇನಾ ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಇಬ್ಬರು ಯೋಧರು ಹಾಗೂ ಒಬ್ಬ ಪೊಲೀಸ್ ಅಧಿಕಾರಿ ಹುತಾತ್ಮರಾಗಿದ್ದಾರೆ. ಸೇನಾ ವಾಹನ ಗುರಿಯಾಗಿಸಿಕೊಂಡು ಉಗ್ರರು ದಾಳಿ ನಡೆಸಿದ್ದು, ಘಟನೆಯಲ್ಲಿ ಐವರು ಯೋಧರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಈ ಪ್ರದೇಶದಲ್ಲಿ ಅಡಗಿರುವ ಉಗ್ರರ ಸದೆ ಬಡಿಯಲು ಸೇನಾ ಕಾರ್ಯಾಚರಣೆ ನಡೆಸಲಾಗಿದೆ.

ಪುಲ್ವಾಮಾದಲ್ಲಿ ಪೊಲೀಸ್ ಠಾಣೆ ಮೇಲೆ ಉಗ್ರರು ಗ್ರೆನೇಡ್ ದಾಳಿ ನಡೆಸಿದ್ದು, ಐವರು ಪೊಲೀಸರು ಗಾಯಗೊಂಡಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಮತ್ತೆ ಪರಿಸ್ಥಿತಿ ಭುಗಿಲೆದ್ದಿದ್ದು, ಸೇನೆ ಮತ್ತು ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...