alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್: ಠಾಣೆಯಲ್ಲೇ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾದ ಆರೋಪಿ

ಮಧ್ಯಪ್ರದೇಶದ ಪೊಲೀಸ್ ಠಾಣೆಯಲ್ಲಿ ಆರೋಪಿಯೊಬ್ಬ ಪೊಲೀಸರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ತಪ್ಪಿಸಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಘಟನೆಯಲ್ಲಿ ಓರ್ವ ಹೆಡ್ ಕಾನ್ಸ್ಟೇಬಲ್ ಸೇರಿದಂತೆ ಮೂರು ಮಂದಿ ಪೊಲೀಸರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನ ಗ್ವಾಲಿಯರ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಪೊಲೀಸ್ ಸಿಬ್ಬಂದಿ ಮೇಲೆ ಗುದ್ದಲಿಯಿಂದ ವಿಷ್ಣು ರಜಾವತ್ ಎಂಬ ಆರೋಪಿ ಹಲ್ಲೆ ನಡೆಸಿದ್ದಾನೆ. ಆರೋಪಿಯ ಹಲ್ಲೆ ಬಗ್ಗೆ ಕಿಂಚಿತ್ ಅರಿವೂ ಇಲ್ಲದಂತೆ ಪೊಲೀಸರು ತಮ್ಮ ಕೆಲಸದಲ್ಲಿ ಮಗ್ನರಾಗಿದ್ದರು. ಈ ವೇಳೆ ಆರೋಪಿ ವಿಷ್ಣು ರಾಜವತ್ ತನ್ನ ಮತ್ತೊಬ್ಬ ಸಹಚರನೊಂದಿಗೆ ಗುದ್ದಲಿಯಿಂದ ಹಲ್ಲೆ ನಡೆಸಿದ್ದಾನೆ. ಆರೋಪಿ ಪೊಲೀಸರ ಮೇಲೆ ಹಲ್ಲೆ ಮಾಡಿದ ದೃಶ್ಯಗಳು ಪೊಲೀಸ್ ಠಾಣೆಯ ಸಿಸಿ ಟಿವಿ ಕ್ಯಾಮರಾದಲ್ಲಿ ದಾಖಲಾಗಿದೆ.

ಅಕ್ರಮ ಗಣಿಗಾರಿಕೆ ಆರೋಪದಲ್ಲಿ ಬಂಧಿಸಲಾದ ವಿಷ್ಣುವನ್ನು ಪೊಲೀಸರು ಸೆಲ್ ನ ಒಳಗೆ ಹಾಕದೆ ಹೊರಗೆ ಕೂರಿಸಿದ್ದರು. ಈ ಸನ್ನಿವೇಶದ ಲಾಭ ಪಡೆದ ಆರೋಪಿ ಪೊಲೀಸರ ಮೇಲೆ ಹಲ್ಲೆ ನಡೆಸಿ ತಪ್ಪಿಸಿಕೊಂಡಿದ್ದಾನೆ. ಆದ್ರೆ ಕೆಲವೇ ಗಂಟೆಗಳ ಅವಧಿಯಲ್ಲಿ ಮತ್ತೆ ಆತನನ್ನ ಪೊಲೀಸರು ಬಂಧಿಸಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ ಮೂವರ ಪೈಕಿ ಹೆಡ್ ಕಾನ್ಸ್ ಟೇಬಲ್ ರಮೇಶ್ ಬಾಬು ಅವರ ಸ್ಥಿತಿ ಚಿಂತಾಜನಕವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...