alex Certify
ಕನ್ನಡ ದುನಿಯಾ       Mobile App
       

Kannada Duniya

ಚಿನ್ನಾಭರಣ ಪ್ರಿಯರಿಗೊಂದು ಸುದ್ದಿ

arun-jaitle m 5

ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿನ ಏರಿಳಿತಗಳ ಕಾರಣದಿಂದ, ದೇಶೀಯ ಮಾರುಕಟ್ಟೆಯಲ್ಲಿಯೂ, ಚಿನ್ನದ ಬೆಲೆಯಲ್ಲಿ ಹೆಚ್ಚು ಕಡಿಮೆಯಾಗುತ್ತಿದೆ. ಈ ನಡುವೆ ಪ್ರಸಕ್ತ ಸಾಲಿನ ಬಜೆಟ್ ನಲ್ಲಿ ಅಬಕಾರಿ ಸುಂಕ ವಿಧಿಸಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಇದರಿಂದಾಗಿ ಚಿನ್ನ- ಬೆಳ್ಳಿ ವರ್ತಕರು ಹಲವು ದಿನಗಳ ಕಾಲ ಮುಷ್ಕರ ನಡೆಸಿದ್ದರಾದರೂ, ಯಾವುದೇ ಪ್ರಯೋಜನವಾಗಿಲ್ಲ. ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, ಚಿನ್ನಾಭರಣಗಳ ಮೇಲೆ ಶೇ. 1ರಷ್ಟು ಅಬಕಾರಿ ಸುಂಕ ಹಿಂಪಡೆಯುವುದಿಲ್ಲ ಎಂದು ತಿಳಿಸಿದ್ದಾರೆ. ಲೋಕಸಭೆಯಲ್ಲಿ ಅವರು, 2016ರ ಹಣಕಾಸು ಮಸೂದೆ ಮೇಲಿನ ಚರ್ಚೆಯಲ್ಲಿ ಮಾತನಾಡಿ, ಅಬಕಾರಿ ಸುಂಕವನ್ನು ಹಿಂಪಡೆಯಲಾಗುವುದಿಲ್ಲ. ಈ ಸುಂಕದಿಂದ ಸಣ್ಣ ವರ್ತಕರು, ಕುಶಲಕರ್ಮಿಗಳಿಗೆ ತೊಂದರೆಯಾಗಲ್ಲ ಎಂದು ಭರವಸೆಯ ಮಾತುಗಳನ್ನಾಡಿದ್ದಾರೆ.

ದೊಡ್ಡ ಪ್ರಮಾಣದಲ್ಲಿ ಚಿನ್ನಾಭರಣ ವಹಿವಾಟು ನಡೆಸುವ ವ್ಯಾಪಾರಿಗಳಿಗೆ ಅಂದರೆ, 12 ಕೋಟಿ ರೂ.ಗಿಂತ ಹೆಚ್ಚಿನ ಮೊತ್ತದ ವಹಿವಾಟು ನಡೆಸುವವರಿಗೆ ಮಾತ್ರ ಈ ನಿಯಮ ಅನ್ವಯಿಸುತ್ತದೆ ಎಂದು ಜೇಟ್ಲಿ ತಿಳಿಸಿದ್ದಾರೆ. ಶೇ.1ರಷ್ಟು ಅಬಕಾರಿ ಸುಂಕ ವಿಧಿಸುವುದನ್ನು ವಿರೋಧಿಸಿ ಚಿನ್ನ- ಬೆಳ್ಳಿ ವರ್ತಕರು ಮುಷ್ಕರ ನಡೆಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...