alex Certify
ಕನ್ನಡ ದುನಿಯಾ       Mobile App
       

Kannada Duniya

ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ‘ಬಿಗ್ ಟ್ವಿಸ್ಟ್’

 

2008 ರಲ್ಲಿ ತನ್ನ ನಿವಾಸದಲ್ಲಿಯೇ ಬರ್ಬರವಾಗಿ ಹತ್ಯೆಗೀಡಾಗಿದ್ದ 14 ವರ್ಷದ ಬಾಲಕಿ ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಮಾನ್ಯ ಮಾಡಿದ್ದು, ವಿಚಾರಣೆಗೆ ಗ್ರೀನ್ ಸಿಗ್ನಲ್ ನೀಡಿದೆ.

ಆರುಷಿ ತಲ್ವಾರ್ ಹಾಗೂ ಅವರ ಮನೆ ಕೆಲಸಗಾರ ಹೇಮರಾಜ್ ಹತ್ಯೆಯಾಗಿದ್ದು, ಈ ಸಂಬಂಧ ತನಿಖೆ ನಡೆಸಿದ್ದ ಸಿಬಿಐ ಪೊಲೀಸರು ಆರುಷಿ ತಲ್ವಾರ್ ತಂದೆ ರಾಜೇಶ್ ತಲ್ವಾರ್ ಹಾಗೂ ತಾಯಿ ನೂಪುರ್ ತಲ್ವಾರ್ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು.

ತಮ್ಮ ಪುತ್ರಿ ಮನೆ ಕೆಲಸಗಾರ ಹೇಮರಾಜ್ ಜತೆ ಸಂಬಂಧ ಹೊಂದಿದ್ದನ್ನು ಕಂಡ ಆರುಷಿ ತಲ್ವಾರ್ ಪೋಷಕರು, ಆಕ್ರೋಶದಿಂದ ಇಬ್ಬರನ್ನೂ ಹತ್ಯೆ ಮಾಡಿದ್ದರೆಂದು ಸಿಬಿಐ ಪೊಲೀಸರು ಆರೋಪ ಪಟ್ಟಿ ಸಲ್ಲಿಸಿದ್ದು, ಇದರ ವಿಚಾರಣೆ ನಡೆಸಿದ್ದ ಸಿಬಿಐ ನ್ಯಾಯಾಲಯ ಶಿಕ್ಷೆ ವಿಧಿಸಿತ್ತು.

ಇದನ್ನು ಪ್ರಶ್ನಿಸಿ ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದು, ಅಲ್ಲಿ ಖುಲಾಸೆಗೊಂಡಿದ್ದರು. ಇದನ್ನು ಪ್ರಶ್ನಿಸಿ ಸಿಬಿಐ ಪೊಲೀಸರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದು, ಈಗ ಪ್ರಕರಣದ ಮರು ವಿಚಾರಣೆಗೆ ನ್ಯಾಯಾಲಯ ಗ್ರೀನ್ ಸಿಗ್ನಲ್ ನೀಡಿದೆ.

ಜೊತೆಗೆ ಆರುಷಿಯೊಂದಿಗೆ ಹತ್ಯೆಗೀಡಾಗಿದ್ದ ಮನೆ ಕೆಲಸಗಾರ ಹೇಮರಾಜ್ ಪತ್ನಿ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನೂ ಪರಿಗಣಿಸುವಂತೆ ಸೂಚನೆ ನೀಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...