alex Certify
ಕನ್ನಡ ದುನಿಯಾ       Mobile App
       

Kannada Duniya

ಆಪ್ ನಲ್ಲಿ ಭುಗಿಲೆದ್ದ ಭಿನ್ನಮತ : ಕೇಜ್ರಿವಾಲ್ ಔಟ್..?

aap-kumar

ನವದೆಹಲಿ: ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿಯಲ್ಲಿ ಭಿನ್ನಮತ ಭುಗಿಲೆದ್ದಿದೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿರುದ್ಧ ಶಾಸಕರು ತಿರುಗಿ ಬಿದ್ದಿದ್ದಾರೆ.

ಪಕ್ಷದಿಂದ ಕೇಜ್ರಿವಾಲ್ ಅವರನ್ನು ಹೊರಹಾಕುವ ಸಾಧ್ಯತೆ ಇದೆ. ಆಪ್ ನಾಯಕ ಕುಮಾರ್ ವಿಶ್ವಾಸ್ ನೇತೃತ್ವದಲ್ಲಿ ಭಿನ್ನಮತೀಯ ಶಾಸಕರ ಸರಣಿ ಸಭೆಗಳು ನಡೆಯುತ್ತಿದ್ದು, ಇಂದು ರಾತ್ರಿ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.

ದೆಹಲಿಯ 3 ಪಾಲಿಕೆಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷ ಸೋಲು ಕಂಡ ಬಳಿಕ ಪಕ್ಷದಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ.

ಅನೇಕ ಶಾಸಕರು ಕೇಜ್ರಿವಾಲ್ ಆಡಳಿತದ ಬಗ್ಗೆ ಆಕ್ಷೇಪಿಸಿದ್ದು, ಕುಮಾರ್ ವಿಶ್ವಾಸ್ ನೇತೃತ್ವದಲ್ಲಿ ಒಂದುಗೂಡಿದ್ದಾರೆ. 3 ದಿನಗಳಲ್ಲಿ ಹೊಸ ಸಿ.ಎಂ. ಘೋಷಣೆಯಾಗುವ ಸಾಧ್ಯತೆ ಕೂಡ ಇದೆ ಎನ್ನಲಾಗಿದೆ.

ಈ ಬೆಳವಣಿಗೆಗಳಿಂದ ಅಸಮಾಧಾನಗೊಂಡಿರುವ ಕೇಜ್ರಿವಾಲ್, ಪ್ರತ್ಯೇಕ ಸಭೆ ನಡೆಸಿದ ಶಾಸಕರ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...