alex Certify
ಕನ್ನಡ ದುನಿಯಾ       Mobile App
       

Kannada Duniya

ಕಾನೂನು ಸಮರದ ಬಿಲ್ ಮುಂದಿಟ್ಟ ಕೇಜ್ರಿವಾಲ್

kejriwal-billದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹಾಗೂ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ನಡುವೆ ಕಾನೂನು ಸಮರ ನಡೆಯುತ್ತಿದೆ. ಅರುಣ್ ಜೇಟ್ಲಿ, ದೆಹಲಿ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಹಣಕಾಸು ಅವ್ಯವಹಾರ ನಡೆದಿದೆ ಎಂದು ಕೇಜ್ರಿವಾಲ್ ಆರೋಪಿಸಿದ್ದು, ಈ ಕುರಿತು ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿರುವ ಅರುಣ್ ಜೇಟ್ಲಿ 10 ಕೋಟಿ ರೂ. ಪರಿಹಾರ ಕೇಳಿದ್ದಾರೆ.

kejriwal-bill-2ಅರವಿಂದ್ ಕೇಜ್ರಿವಾಲ್ ಪರ ಖ್ಯಾತ ವಕೀಲ ರಾಮ್ ಜೇಠ್ಮಲಾನಿ ಸೇರಿದಂತೆ ಹಲವು ಘಟಾನುಘಟಿ ವಕೀಲರು ವಾದ ಮಾಡುತ್ತಿದ್ದು, ಸಹಜವಾಗಿಯೇ ಅವರುಗಳ ಶುಲ್ಕ ದುಬಾರಿಯಾಗಿದೆ. ಇತ್ತೀಚೆಗೆ ರಾಮ್ ಜೇಠ್ಮಲಾನಿ 1 ಕೋಟಿ ರೂ. ಅಧಿಕ ಬಿಲ್ ಕಳುಹಿಸಿದ್ದಾರೆ. ಅರವಿಂದ್ ಕೇಜ್ರಿವಾಲ್ ಅವರ ಕಾನೂನು ಸಮರದ ಒಟ್ಟು ಬಿಲ್ 3.8 ಕೋಟಿ ರೂಪಾಯಿಗಳೆಂದು ಹೇಳಲಾಗಿದೆ.

ಇದೀಗ ಈ ಬಿಲ್ ಮೊತ್ತವನ್ನು ಪಾವತಿಸುವಂತೆ ಕೋರಿ ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಲೆಪ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಕಳುಹಿಸಿದ್ದು, ವಿವಾದಕ್ಕೆ ಕಾರಣವಾಗಿದೆ. ದೆಹಲಿ ಬಿಜೆಪಿ ವಕ್ತಾರ ತೇಜಿಂದರ್ ಸಿಂಗ್ ಪಾಲ್ ಬಗ್ಗಾ ಈ ಕುರಿತು ಟ್ವೀಟ್ ಮಾಡಿದ್ದು, ಕೇಜ್ರಿವಾಲ್ ರ ಖಾಸಗಿ ಕಾನೂನು ಸಮರಕ್ಕೆ ಸರ್ಕಾರದ ಹಣ ಕೇಳಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ. ಲೆಪ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್, ಬಿಲ್ ಪಾವತಿ ಕುರಿತಂತೆ ಕಾನೂನು ತಜ್ಞರ ಸಲಹೆ ಕೇಳಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...