alex Certify
ಕನ್ನಡ ದುನಿಯಾ       Mobile App
       

Kannada Duniya

ಓಟದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿ ಕುಸಿದು ಬಿದ್ದು ಕೊನೆಯುಸಿರೆಳೆದ

ಮಧ್ಯಪ್ರದೇಶ ಅಶೋಕ್ ನಗರದ ಇಸಾಗಡ್ ತಹಸಿಲ್ ನಲ್ಲಿ ಖಾಸಗಿ ಕಾಲೇಜೊಂದರಲ್ಲಿ ಶನಿವಾರ 11ನೇ ತರಗತಿ ಓದುತ್ತಿರುವ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಅಶುತೋಷ್ ಸ್ಕೂಲಿನಲ್ಲಿಯೇ ಸಾವನ್ನಪ್ಪಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಶುರುಮಾಡಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಕೂಲಿನ ವಿದ್ಯಾರ್ಥಿಗಳು ಹಾಗೂ ಕುಟುಂಬಸ್ಥರು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಮಾಹಿತಿಗಳ ಪ್ರಕಾರ ಭಾರತ್ ಮಾತಾ ಸ್ಕೂಲಿನಲ್ಲಿ 11ನೇ ತರಗತಿ ಓದುತ್ತಿರುವ 17 ವರ್ಷದ ಅಶುತೋಷ್ ಶಾಲೆಯಲ್ಲಿ ನಡೆದ ಕ್ರೀಡೆಯಲ್ಲಿ ಪಾಲ್ಗೊಂಡಿದ್ದ.

200 ಮೀಟರ್ ಓಟದ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದ ಅಶುತೋಷ್ ಓಡುವಾಗ ಕುಸಿದು ಬಿದ್ದಿದ್ದಾನೆ. ತಕ್ಷಣ ಆತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದ್ರೆ ಸ್ಥಳದಲ್ಲಿಯೇ ಅಶುತೋಷ್ ಸಾವನ್ನಪ್ಪಿದ್ದ ಎನ್ನಲಾಗಿದೆ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ವೇಳೆ ವಿದ್ಯಾರ್ಥಿ ಆರೋಗ್ಯವಾಗಿದ್ದ ಎನ್ನಲಾಗಿದೆ. ಆದ್ರೆ ಓಡುವ ವೇಳೆ ಸರಿಯಾಗಿ ಉಸಿರು ಎಳೆದುಕೊಳ್ಳಲಾಗದೆ ಕುಸಿದು ಬಿದ್ದಿದ್ದಾನೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...