alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯಾನ್ಸರ್ ಕುರಿತ ಹೇಳಿಕೆಗೆ ಕ್ಷಮೆ ಕೋರಿದ ಸಚಿವ

ನೂತನವಾಗಿ ನೇಮಕಗೊಂಡ ಶಿಕ್ಷಕರನ್ನುದ್ದೇಶಿಸಿ ಮಾತನಾಡುವ ವೇಳೆ ಕ್ಯಾನ್ಸರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಅಸ್ಸಾಂ ಆರೋಗ್ಯ ಸಚಿವ ಹಿಮಂತ ಬಿಸ್ವಾ ಶರ್ಮಾ ಈಗ ಕ್ಷಮೆ ಕೋರಿದ್ದಾರೆ.

ಯಾವ ಮನುಷ್ಯ ಪಾಪಗಳನ್ನು ಮಾಡುತ್ತಾನೋ ಅಂತವರು ಕ್ಯಾನ್ಸರ್ ಕಾಯಿಲೆಗೆ ತುತ್ತಾಗುತ್ತಾರೆ. ಅಷ್ಟೇ ಅಲ್ಲ, ಕುಟುಂಬದ ಯಾರಾದರೂ ಪಾಪ ಕೃತ್ಯವೆಸಗಿದರೆ ದೇವರ ನ್ಯಾಯಾಲಯದಲ್ಲಿ ತಪ್ಪಿಸಿಕೊಳ್ಳಲಾಗುವುದಿಲ್ಲವೆಂದಿದ್ದ ಹಿಮಂತ ಬಿಸ್ವಾ ಶರ್ಮಾ, ತಮ್ಮ ಹೇಳಿಕೆಗೆ ಸಾರ್ವಜನಿಕ ವಲಯದಲ್ಲಿ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಗುರುವಾರದಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ತಮ್ಮ ಹೇಳಿಕೆಯಿಂದ ನೋವಾಗಿದ್ದರೆ ಕ್ಷಮೆ ಕೋರುವುದಾಗಿ ಹೇಳಿದ್ದಾರೆ.

ಜೊತೆಗೆ ಅಸ್ಸಾಂ ಆರೋಗ್ಯ ಸಚಿವರಾಗಿ ತಾವು ಮಾಡಿರುವ ಕಾರ್ಯಗಳನ್ನು ಪಟ್ಟಿ ಮಾಡಿರುವ ಹಿಮಂತ ಬಿಸ್ವಾ ಶರ್ಮಾ, ತಮ್ಮ ತಂದೆ ಸೇರಿದಂತೆ ಕೆಲ ಆತ್ಮೀಯ ಸ್ನೇಹಿತರು ಕ್ಯಾನ್ಸರ್ ಗೆ ಬಲಿಯಾಗಿದ್ದಾರೆ. ಹೀಗಾಗಿ ಸಹಜವಾಗಿ ತಮಗೆ ನೋವಾಗಿದೆ. ರಾಜ್ಯದಲ್ಲಿ ಕ್ಯಾನ್ಸರ್ ರೋಗಿಗಳಿಗೆ ಉಚಿತ ಕಿಮೋಥೆರಪಿ ಸೇರಿದಂತೆ ಹಲವು ಸೌಲಭ್ಯ ನೀಡಲಾಗುತ್ತಿದೆ. ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು 2 ಲಕ್ಷ ರೂ. ಆರ್ಥಿಕ ಸಹಾಯ ನೀಡಲಾಗುತ್ತಿದೆ. ಜೊತೆಗೆ ಈ ಕಾಯಿಲೆಯನ್ನು ತಡೆಗಟ್ಟಲು ತಂಬಾಕು ನಿಷೇಧ ಕಾಯ್ದೆಯನ್ನು ಜಾರಿಗೆ ತರಲಾಗಿದೆ ಎಂದಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...