alex Certify
ಕನ್ನಡ ದುನಿಯಾ       Mobile App
       

Kannada Duniya

ಗುಜರಾತ್ ಚುನಾವಣೆ ಮೇಲೆ ಭಯೋತ್ಪಾದಕರ ಕಣ್ಣು

ಗುಜರಾತ್ ವಿಧಾನಸಭಾ ಚುನಾವಣೆ ಹತ್ತಿರ ಬರ್ತಿದೆ. ರಾಜಕೀಯ ನಾಯಕರ ಪ್ರಚಾರ ಚುರುಕು ಪಡೆದಿದೆ. ಇದೇ ವೇಳೆ ಗುಜರಾತ್ ಚುನಾವಣೆ ಮೇಲೆ ಭಯೋತ್ಪಾದಕರು ಕಣ್ಣಿಟ್ಟಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಪಾಕಿಸ್ತಾನಿ ಭಯೋತ್ಪಾದನಾ ಸಂಘಟನೆ ದೊಡ್ಡ ಪ್ರಮಾಣದಲ್ಲಿ ದಾಳಿ ನಡೆಸುವ ಸಾಧ್ಯತೆಯಿದೆ.

ಗುಪ್ತಚರ ಮೂಲಗಳ ಪ್ರಕಾರ, ಪಾಕಿಸ್ತಾನಿ ಭಯೋತ್ಪಾದಕರು ಸಮುದ್ರ ಮಾರ್ಗದ ಮೂಲಕ ಭಾರತ ಪ್ರವೇಶ ಮಾಡುವ ಸಾಧ್ಯತೆ ಹೆಚ್ಚಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಯೋತ್ಪಾದಕರ ಗುರಿ ಎನ್ನಲಾಗ್ತಿದೆ.

ಗುಜರಾತಿನ ಕರಾವಳಿ ಪ್ರದೇಶದಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದೆ. 10 ಯುದ್ಧನೌಕೆಗಳು ಸಿದ್ಧವಾಗಿ ನಿಂತಿವೆ. ಭಯೋತ್ಪಾದಕರ ದಾಳಿ ತಡೆಗೆ ಎಲ್ಲ ವ್ಯವಸ್ಥೆ ಮಾಡಲಾಗಿದೆ. ಗುಪ್ತಚರ ಇಲಾಖೆ ಜೊತೆ ಸಂಪರ್ಕದಲ್ಲಿರುವ ಭದ್ರತಾ ಪಡೆಗಳು ಮೀನುಗಾರರಿಗೆ ಸೂಚನೆ ನೀಡಿವೆ. ಅನುಮಾನಾಸ್ಪದ ವ್ಯಕ್ತಿಗಳು ಕಂಡು ಬಂದಲ್ಲಿ ತಕ್ಷಣ ಭದ್ರತಾ ಪಡೆಗೆ ಮಾಹಿತಿ ನೀಡುವಂತೆ ಸೂಚನೆ ನೀಡಲಾಗಿದೆ.

ಡಿಸೆಂಬರ್ 9 ಮತ್ತು ಡಿಸೆಂಬರ್ 14ರಂದು ಗುಜರಾತ್ ವಿಧಾನಸಭೆಗೆ ಮತದಾನ ನಡೆಯಲಿದೆ. ಈಗಾಗಲೇ ಪ್ರಚಾರದ ಭರಾಟೆ ಜೋರಾಗಿದ್ದು, ಡಿಸೆಂಬರ್ 18ರಂದು ಮತ ಎಣಿಕೆ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...