alex Certify
ಕನ್ನಡ ದುನಿಯಾ       Mobile App
       

Kannada Duniya

ನಟಿ ರೋಜಾ ಇದ್ದ ವಿಮಾನದ ಟೈಯರ್ ಸ್ಪೋಟ

ಹೈದರಾಬಾದ್: ಹೈದರಾಬಾದ್ ವಿಮಾನ ನಿಲ್ದಾಣದಲ್ಲಿ ಬುಧವಾರ ರಾತ್ರಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಅದೃಷ್ಟವಶಾತ್ ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಅಪಾಯದಿಂದ ಪಾರಾಗಿದ್ದಾರೆ.

ಇಂಡಿಗೊ ವಿಮಾನ ಹೈದರಾಬಾದ್ ನಿಲ್ದಾಣದಲ್ಲಿ ಇಳಿಯುತ್ತಿದ್ದಂತೆ ಟೈಯರ್ ಸ್ಪೋಟಗೊಂಡಿದ್ದು, ಕೂಡಲೇ ವಿಮಾನದಲ್ಲಿದ್ದ 77 ಮಂದಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ.

ತಿರುಪತಿಯಿಂದ ಆಗಮಿಸಿದ್ದ ಇಂಡಿಗೋ ಫ್ಲೈಟ್ 6 ಇ 7117 ವಿಮಾನ ಇಳಿಯುವಾಗ ಟೈಯರ್ ಸ್ಪೋಟಿಸಿದೆ. ಉಳಿದಂತೆ ಯಾವುದೇ ತೊಂದರೆ ಇಲ್ಲವೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಟೈಯರ್ ಸ್ಪೋಟವಾದ ಕೂಡಲೇ ನಿಲ್ದಾಣದ ಸಿಬ್ಬಂದಿ ಸುರಕ್ಷತಾ ಕಾರ್ಯಾಚರಣೆ ನಡೆಸಿದ್ದಾರೆ. ಪೈಲಟ್ ವಿಮಾನವನ್ನು ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ. ಘಟನೆಯ ಕಾರಣದಿಂದ 2 ವಿಮಾನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ.  ಈ ವಿಮಾನದಲ್ಲಿ ನಟಿ ಹಾಗೂ ವೈ.ಎಸ್.ಆರ್. ಕಾಂಗ್ರೆಸ್ ಪಕ್ಷದ ಶಾಸಕಿ ರೋಜಾ ಅವರು ಇದ್ದರು. ಅವರು ಸೇರಿದಂತೆ ಎಲ್ಲಾ ಪ್ರಯಾಣಿಕರು ಪಾರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...