alex Certify
ಕನ್ನಡ ದುನಿಯಾ       Mobile App
       

Kannada Duniya

ಸತತ 2 ನೇ ಬಾರಿಗೆ ಗದ್ದುಗೆಗೇರಿದ ದೀದಿ

mamata-oath-signಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸತತ ಎರಡನೇ ಬಾರಿಗೆ ತೃಣಮೂಲ ಕಾಂಗ್ರೆಸ್ ಪಕ್ಷದ ಮಮತಾ ಬ್ಯಾನರ್ಜಿ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಆನೇಕ ರಾಜಕೀಯ ನೇತಾರರು, ಸಿನಿಮಾ ತಾರೆಯರು ಹಾಗೂ ಕ್ರಿಕೆಟ್ ದಿಗ್ಗಜರು ಪಾಲ್ಗೊಂಡಿದ್ದರು.

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲೇ ಅದ್ದೂರಿ ಎನ್ನಲಾದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ, ಮಮತಾ ಬ್ಯಾನರ್ಜಿಯವರಿಗೆ ಪ್ರಮಾಣ ವಚನ ಬೋಧಿಸಿದರು. ಆ ನಂತರ 41 ಮಂದಿ ಶಾಸಕರುಗಳು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಯಾದವ್, ಕೇಂದ್ರ ಸಚಿವ ಅರುಣ್ ಜೇಟ್ಲಿ, ಲಾಲೂ ಪ್ರಸಾದ್ ಯಾದವ್, ಖ್ಯಾತ ಕ್ರಿಕೆಟಿಗ ಸೌರವ್ ಗಂಗೂಲಿ ಸೇರಿದಂತೆ ಹಲವು ಗಣ್ಯರು ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...