alex Certify
ಕನ್ನಡ ದುನಿಯಾ       Mobile App
       

Kannada Duniya

ವಾಜಪೇಯಿ ನಿಧನದ ಸುದ್ದಿಯನ್ನು ಘೋಷಿಸಿದ್ದು ರಾಜನಾಥ್ ಸಿಂಗ್

ವಯೋಸಹಜ ಕಾರಣದಿಂದ ಅನಾರೋಗ್ಯಕ್ಕೊಳಗಾಗಿ ನವದೆಹಲಿಯ ಅಖಿಲ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ವಿಧಿವಶರಾದ ಕುರಿತು ಮಾಹಿತಿ ಹೊರ ಬಿದ್ದಿದೆ.

ಆದರೆ ಈ ಕುರಿತು ಏಮ್ಸ್ ಆಸ್ಪತ್ರೆಯ ವೈದ್ಯರು ಅಧಿಕೃತವಾಗಿ ಘೋಷಿಸಿಲ್ಲವಾದರೂ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುವ ವೇಳೆ ಈ ವಿಚಾರವನ್ನು ತಿಳಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿಯವರ ಆರೋಗ್ಯ ವಿಚಾರಿಸಲು ಏಮ್ಸ್ ಆಸ್ಪತ್ರೆಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿಯವರು ಬಳಿಕ ಅಲ್ಲಿಂದ ತೆರಳಿದ್ದು, ಈ ಸಂದರ್ಭದಲ್ಲಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...