alex Certify
ಕನ್ನಡ ದುನಿಯಾ       Mobile App
       

Kannada Duniya

ವಾಜಪೇಯಿ ಆರೋಗ್ಯದಲ್ಲಿ ಸುಧಾರಣೆ: ಏಮ್ಸ್ ನಲ್ಲಿ ಮುಂದುವರೆದ ಚಿಕಿತ್ಸೆ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯದಲ್ಲಿ ಸುಧಾರಣೆ ಕಂಡು ಬರ್ತಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ವಾಜಪೇಯಿಯವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಡಿಸ್ಜಾರ್ಜ್ ಆಗುವ ಸಾಧ್ಯತೆ ಕಡಿಮೆ ಇದೆ ಎಂದು ಮೂಲಗಳು ಹೇಳಿವೆ.

ಸೋಮವಾರ ಅಟಲ್ ಬಿಹಾರಿ ವಾಜಪೇಯಿಯವರನ್ನು ನಿಯಮಿತ ಚಿಕಿತ್ಸೆಗಾಗಿ ಏಮ್ಸ್ ಗೆ ದಾಖಲಿಸಲಾಗಿತ್ತು. ಅಲ್ಲಿ ಡಯಾಲಿಸಸ್ ನಡೆದಿದೆ. ವಾಜಪೇಯಿ ಮೂತ್ರದ ಸೋಂಕಿನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಕೆಲವೇ ಗಂಟೆಗಳಲ್ಲಿ ಏಮ್ಸ್ ವೈದ್ಯರು ವಾಜಪೇಯಿ ಆರೋಗ್ಯದ ಬಗ್ಗೆ ಅಧಿಕೃತ ಮಾಹಿತಿ ನೀಡುವ ಸಾಧ್ಯತೆಯಿದೆ.

ಮೂಲಗಳ ಪ್ರಕಾರ ವಾಜಪೇಯಿ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಡಯಾಲಿಸಸ್ ನಂತ್ರ ಮೂತ್ರ ವಿಸರ್ಜನೆ ಮಾಡಿದ್ದಾರಂತೆ. ಆದ್ರೆ ಈಗ್ಲೂ ಐಸಿಯುವಿನಲ್ಲಿಯೇ ಚಿಕಿತ್ಸೆ ಮುಂದುವರೆದಿದೆ. ಇಂದು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ.

ಎಂಡಿಎಂಕೆ ಮುಖ್ಯಸ್ಥ ವೈಕೋ, ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ವಿಚಾರಿಸಿ ಹೊರ ಬಂದ ನಂತ್ರ ವಾಜಪೇಯಿ ಆರೋಗ್ಯವಾಗಿದ್ದಾರೆ. ಭಯಪಡುವ ಅಗತ್ಯವಿಲ್ಲ ಎಂದಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಅನೇಕ ರಾಜಕೀಯ ನಾಯಕರು ಏಮ್ಸ್ ಗೆ ಬಂದು ವಾಜಪೇಯಿ ಆರೋಗ್ಯ ವಿಚಾರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...