alex Certify
ಕನ್ನಡ ದುನಿಯಾ       Mobile App
       

Kannada Duniya

ವಾಜಪೇಯಿ ಪರಿಸ್ಥಿತಿ ಗಂಭೀರ: ಏಮ್ಸ್ ಗೆ ಭೇಟಿ ನೀಡಿದ ಮೋದಿ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ಗಂಭೀರವಾಗಿದೆ. ದೆಹಲಿ ಏಮ್ಸ್ ನತ್ತ ರಾಜಕೀಯ ನಾಯಕರು ಹರಿದು ಬರ್ತಿದ್ದಾರೆ. ಈ ಮಧ್ಯೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತೊಮ್ಮೆ ಏಮ್ಸ್ ಗೆ ಬಂದು ಆರೋಗ್ಯ ವಿಚಾರಿಸಿದ್ದಾರೆ.

ಬೆಳಿಗ್ಗೆ 11 ಗಂಟೆಗೆ ಏಮ್ಸ್ ವೈದ್ಯರ ತಂಡ ವಾಜಪೇಯಿ ಆರೋಗ್ಯದ ಬಗ್ಗೆ ಮಾಹಿತಿ ನೀಡಿತ್ತು. ವಾಜಪೇಯಿ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ನಲ್ಲಿ ಚಿಕಿತ್ಸೆ ನಡೆಯುತ್ತಿದೆ ಎಂದು ವೈದ್ಯರು ತಿಳಿಸಿದ್ದರು. ಇನ್ನೇನು ಕೆಲವೇ ಕ್ಷಣಗಳಲ್ಲಿ ಮತ್ತೊಂದು ಮೆಡಿಕಲ್ ಬುಲೆಟಿನ್ ಬಿಡುಗಡೆ ಮಾಡುವ ಸಾಧ್ಯತೆಯಿದೆ.

ಬುಧವಾರ ರಾತ್ರಿ ಏಮ್ಸ್ ಗೆ ಬಂದು ವಾಜಪೇಯಿ ಆರೋಗ್ಯ ವಿಚಾರಿಸಿದ್ದ ಮೋದಿ ಗುರುವಾರ ಮತ್ತೊಮ್ಮೆ ಏಮ್ಸ್ ಗೆ ಭೇಟಿ ನೀಡಿದ್ದಾರೆ. ಮೋದಿ, ವಾಜಪೇಯಿ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಸೇರಿದಂತೆ ಅನೇಕ ನಾಯಕರು ಏಮ್ಸ್ ಗೆ ಭೇಟಿ ನೀಡಿದ್ದಾರೆ. ಏಮ್ಸ್ ಹಾಗೂ ವಾಜಪೇಯಿ ಮನೆ ಮುಂದೆ ಬಿಗಿ ಭದ್ರತೆ ಒದಗಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...