alex Certify
ಕನ್ನಡ ದುನಿಯಾ       Mobile App
       

Kannada Duniya

ಅಜಾತ ಶತ್ರು ಪಂಚಭೂತಗಳಲ್ಲಿ ಲೀನ

ಮಾಜಿ ಪ್ರಧಾನಿ, ಅಜಾತ ಶತ್ರು ಅಟಲ್ ಬಿಹಾರಿ ವಾಜಪೇಯಿ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಮಾರಕದಲ್ಲಿ ಅಂತ್ಯ ಸಂಸ್ಕಾರ ನೆರವೇರಿದೆ. ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ಮಾಡಲಾಯ್ತು. ದತ್ತು ಪುತ್ರಿ ನಮಿತಾ, ಚಿತೆಗೆ ಅಗ್ನಿಸ್ಪರ್ಶ ಮಾಡಿದ್ರು.

ಅಟಲ್ ಬಿಹಾರಿ ವಾಜಪೇಯಿ ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ವಾಜಪೇಯಿ ಕಳೆದುಕೊಂಡ ದೇಶ ಅನಾಥವಾಗಿದೆ. ಸಹಸ್ರಾರು ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ನಾಯಕರಿಂದ ಹಿಡಿದು ಶ್ರೀಸಾಮಾನ್ಯರವರೆಗೆ ಸಾವಿರಾರು ಮಂದಿ ವಾಜಪೇಯಿ ಅಂತಿಮ ದರ್ಶನ ಪಡೆದ್ರು. ನಂತ್ರ ಮೆರವಣಿಗೆ ಮೂಲಕ ಚಿತಾಗಾರಕ್ಕೆ ಪಾರ್ಥೀವ ಶರೀರವನ್ನು ತರಲಾಯ್ತು.

ಸರ್ಕಾರಿ ಸಕಲ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿದೆ. ಈ ವೇಳೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಪ್ರಧಾನ ಮಂತ್ರಿ ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ, ರಾಜನಾಥ್ ಸಿಂಗ್, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ, ಮುರಳಿ ಮನೋಹರ ಜೋಷಿ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿದ್ದರು. ಭೂತಾನ್ ರಾಜ ಜಿಗ್ಮೆ ಕೇಸರ್, ಅಫ್ಘಾನಿಸ್ತಾನದ ಮಾಜಿ ಅಧ್ಯಕ್ಷ ಹಮೀದ್ ಕರ್ಜಾಯಿ ಸೇರಿದಂತೆ ಬಾಂಗ್ಲಾದೇಶ, ನೇಪಾಳ, ಶ್ರೀಲಂಕಾದ ವಿದೇಶಾಂಗ ಸಚಿವರು ಅಂತಿಮ ನಮನ ಸಲ್ಲಿಸಿದ್ರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...