alex Certify
ಕನ್ನಡ ದುನಿಯಾ       Mobile App
       

Kannada Duniya

ಹರಿದ್ವಾರದ ಗಂಗಾ ನದಿಯಲ್ಲಿ ವಿಸರ್ಜನೆಯಾಗಲಿದೆ ವಾಜಪೇಯಿ ಚಿತಾಭಸ್ಮ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮವನ್ನು ದೇಶದ ಪವಿತ್ರ ನದಿಗಳಲ್ಲಿ ವಿಸರ್ಜನೆ ಮಾಡಲಾಗುವುದು. ಇಂದಿನಿಂದ ಚಿತಾಭಸ್ಮ ವಿಸರ್ಜನೆ ಕಾರ್ಯ ನಡೆಯಲಿದೆ. ಇಂದು ಹರಿದ್ವಾರದಲ್ಲಿ ಗಂಗಾ ನದಿಗೆ ಕುಟುಂಬಸ್ಥರು ಚಿತಾಭಸ್ಮ ವಿಸರ್ಜನೆ ಮಾಡಲಿದ್ದಾರೆ.

ಗುರುವಾರ 93 ವರ್ಷದ ಅಜಾತಶತ್ರು ನಮ್ಮನ್ನಗಲಿದ್ದಾರೆ. ಏಮ್ಸ್ ಆಸ್ಪತ್ರೆಯಲ್ಲಿ ಅಟಲ್ ಬಿಹಾರಿ ವಾಜಪೇಯಿ ಕೊನೆಯುಸಿರೆಳೆದಿದ್ದರು. ಶುಕ್ರವಾರ ದೆಹಲಿಯ ರಾಷ್ಟ್ರೀಯ ಸ್ಮೃತಿ ಸ್ಥಳದಲ್ಲಿ ಅಂತ್ಯಸಂಸ್ಕಾರ ನೆರವೇರಿತ್ತು.

ಭಾನುವಾರ ಬೆಳಿಗ್ಗೆ ರಾಷ್ಟ್ರೀಯ ಸ್ಮೃತಿ ಸ್ಥಳಕ್ಕೆ ಬಂದ ವಾಜಪೇಯಿ ದತ್ತುಪುತ್ರಿ ನಮಿತಾ ಹಾಗೂ ಮೊಮ್ಮಗಳು ನಿಹಾರಿಕಾ ಚಿತಾಭಸ್ಮವನ್ನು ತೆಗೆದುಕೊಂಡಿದ್ದಾರೆ. ಮೊದಲು ಪ್ರೇಮ ಆಶ್ರಮಕ್ಕೆ ತೆರಳಲಿರುವ ನಮಿತಾ ರಸ್ತೆ ಮಾರ್ಗದಲ್ಲಿ ಹರಿದ್ವಾರಕ್ಕೆ ತೆರಳಿ ಗಂಗಾ ನದಿಯಲ್ಲಿ ಚಿತಾಭಸ್ಮ  ವಿಸರ್ಜನೆ ಮಾಡಲಿದ್ದಾರೆ.

ಹರಿದ್ವಾರದಲ್ಲಿ ನಡೆಯುವ ಚಿತಾಭಸ್ಮ ವಿಸರ್ಜನೆ ವೇಳೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ, ಸಚಿವ ರಾಜನಾಥ್ ಸಿಂಗ್, ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಅನೇಕ ನಾಯಕರು ಉಪಸ್ಥಿತರಿರಲಿದ್ದಾರೆ. ಆಗಸ್ಟ್ 20 ರಂದು ದೆಹಲಿಯಲ್ಲಿ ಹಾಗೂ ಆಗಸ್ಟ್ 23 ರಂದು ಲಕ್ನೋದಲ್ಲಿ ಶೋಕ ಸಭೆ ಕೂಡ ನಡೆಯಲಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...