alex Certify
ಕನ್ನಡ ದುನಿಯಾ       Mobile App
       

Kannada Duniya

ವಾಜಪೇಯಿಯವರ ಸಾವಿನ ಲಾಭವನ್ನು ಪಡೆಯಲು ಮುಂದಾಗಿದೆಯಾ ಬಿಜೆಪಿ…?

ಮಾಜಿ ಪ್ರಧಾನಿ, ರಾಜಕೀಯ ರಂಗದ ಅಜಾತ ಶತ್ರು ದಿವಂಗತ ಅಟಲ್ ಬಿಹಾರಿ ವಾಜಪೇಯಿಯವರ ಚಿತಾಭಸ್ಮ ವಿಸರ್ಜನೆ ವಿಚಾರ ಈಗ ವಿವಾದಕ್ಕೆ ಕಾರಣವಾಗಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಲಾಭ ಗಳಿಸುವ ದೃಷ್ಟಿಯಿಂದ ಬಿಜೆಪಿ ಸಾವಿನ ಮನೆಯಲ್ಲಿ ರಾಜಕಾರಣ ಮಾಡುತ್ತಿದೆ ಎಂದು ವಿಪಕ್ಷಗಳು ಆರೋಪ ಮಾಡುತ್ತಿರುವ ಮಧ್ಯೆ, ವಾಜಪೇಯಿಯವರ ಸೋದರ ಸೊಸೆ ಕೂಡ ಇದಕ್ಕೆ ಧ್ವನಿಗೂಡಿಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮವನ್ನು ಬಿಜೆಪಿ ನಾಯಕರು ದೇಶದ ಪ್ರಮುಖ ನದಿಗಳಲ್ಲಿ ವಿಸರ್ಜನೆ ಮಾಡಲು ಮುಂದಾಗಿದ್ದು, ಇದಕ್ಕೆ ಆಯಾ ರಾಜ್ಯಗಳ ಬಿಜೆಪಿ ಮುಖಂಡರು ಕೈಜೋಡಿಸಿದ್ದಾರೆ. ಮೆರವಣಿಗೆ ಮೂಲಕ ವಾಜಪೇಯಿಯವರ ಚಿತಾಭಸ್ಮವನ್ನು ನದಿಗಳಲ್ಲಿ ವಿಸರ್ಜನೆ ಮಾಡಲಾಗುತ್ತಿದೆ.

ಇದಕ್ಕೆ ವಿಪಕ್ಷಗಳ ನಾಯಕರು ಅಪಸ್ವರ ಎತ್ತಿರುವುದರ ಮಧ್ಯೆ, ಅಟಲ್ ಬಿಹಾರಿ ವಾಜಪೇಯಿಯವರ ಹತ್ತಿರದ ಸಂಬಂಧಿ ಕರುಣಾ ಶುಕ್ಲಾ ಸಹ ಇದಕ್ಕೆ ಧ್ವನಿಗೂಡಿಸಿದ್ದು, ವಾಜಪೇಯಿಯವರು ಬದುಕಿದ್ದಾಗಲೂ ಲಾಭ ಗಳಿಸಿದ ಬಿಜೆಪಿ, ಅವರ ಸಾವಿನ ನಂತರವೂ ಲಾಭ ಮಾಡಿಕೊಳ್ಳಲು ಹೊರಟಿದೆ ಎಂದು ಆರೋಪಿಸಿದ್ದಾರಲ್ಲದೆ ದೇಶದ ಜನತೆ ಇದನ್ನು ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...