alex Certify
ಕನ್ನಡ ದುನಿಯಾ       Mobile App
       

Kannada Duniya

ಹೋಮ, ಹವನ ಮಾಡುವವರಿಗೆ ಶಾಕಿಂಗ್ ನ್ಯೂಸ್

bihar 28

ಪಾಟ್ನಾ: ಬಿಹಾರದಲ್ಲಿ ಮದ್ಯನಿಷೇಧ ಮಾಡುವ ಮೂಲಕ, ಮಹತ್ವದ ತೀರ್ಮಾನ ಕೈಗೊಂಡಿದ್ದ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಸರ್ಕಾರ, ಇದೀಗ ವಿಲಕ್ಷಣ ಆದೇಶವೊಂದನ್ನು ಹೊರಡಿಸಿದ್ದು, ಎಲ್ಲರ ಹುಬ್ಬೇರುವಂತೆ ಮಾಡಿದೆ.

ದೇಶದೆಲ್ಲೆಡೆ ಇರುವಂತೆಯೇ, ಬಿಹಾರದಲ್ಲಿ ಭಾರೀ ಬಿಸಿಲಿನ ವಾತಾವರಣ ಇದೆ. ಬಿಸಿಲಿನ ಕಾರಣದಿಂದ ಸಣ್ಣಪುಟ್ಟ ಅಗ್ನಿ ಅವಘಡಗಳು ಕೂಡ ದೊಡ್ಡದಾಗಿ, ಸಂಭವಿಸಿದ ಹಲವಾರು ದುರಂತಗಳಲ್ಲಿ 66 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ, 1200ಕ್ಕೂ ಅಧಿಕ ಜಾನುವಾರು ಮೃತಪಟ್ಟಿವೆ. ಈ ಹಿನ್ನೆಲೆಯಲ್ಲಿ ಸಿಎಂ ನಿತೀಶ್ ಕುಮಾರ್, ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಹೋಮ, ಹವನ ನಡೆಸಬಾರದು. ಇವುಗಳನ್ನೆಲ್ಲಾ ಬೆಳಿಗ್ಗೆ 9ಗಂಟೆಯೊಳಗೆ ಮುಗಿಸಬೇಕೆಂದು ಆದೇಶ ಹೊರಡಿಸಿದ್ದಾರೆ.

ಇಂತಹ ಆದೇಶದ ನಂತರ, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರು, ಬಿಸಿಲಿನಿಂದ ಅಗ್ನಿ ದುರಂತ ಹೆಚ್ಚಾಗಿರುವುದರಿಂದ ಬೆಳಿಗ್ಗೆಯಿಂದ ಸಂಜೆಯವರೆಗೆ ಬೆಂಕಿ ಹಚ್ಚಬಾರದು. ಅಡುಗೆ ಮಾಡಬಾರದು. ಆದಷ್ಟು ಬೆಂಕಿ ಬಳಕೆಯನ್ನು ಕಡಿಮೆ ಮಾಡಬೇಕೆಂದು ಸಲಹೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...