alex Certify
ಕನ್ನಡ ದುನಿಯಾ       Mobile App
       

Kannada Duniya

ಚಿಕನ್, ಮೊಟ್ಟೆ ಪ್ರಿಯರಿಗೆ ಹೀಗೊಂದು ಸಲಹೆ

egg

ನವದೆಹಲಿ: ಮೊಟ್ಟೆ, ಚಿಕನ್ ಪ್ರಿಯರಿಗೆ ದೆಹಲಿ ಸರ್ಕಾರ ಕಟ್ಟು ನಿಟ್ಟಿನ ಸೂಚನೆಯೊಂದನ್ನು ನೀಡಿದೆ. ಯಾವುದೇ ಕಾರಣಕ್ಕೂ ಅರೆಬೆಂದ ಮೊಟ್ಟೆ, ಕೋಳಿ ಮಾಂಸ ತಿನ್ನದಂತೆ ಸಲಹೆ ನೀಡಲಾಗಿದೆ.

ದೆಹಲಿಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮ ಕೈಗೊಂಡಿರುವ ದೆಹಲಿ ಸರ್ಕಾರ, ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದು,  ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಸಭೆ ನಡೆಸಲಾಗಿದೆ. ದೆಹಲಿಯ ವಿವಿಧ ಪ್ರದೇಶಗಳಲ್ಲಿ 6 ಹಕ್ಕಿಗಳು ಮೃತಪಟ್ಟಿರುವ ವರದಿಯಾಗಿದೆ. ಆದರೆ, ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ ರೋಗದ ಯಾವುದೇ ಲಕ್ಷಣ ಕಂಡು ಬಂದಿಲ್ಲ.

ಈ ಕುರಿತಂತೆ ಮಾಹಿತಿ ನೀಡಿರುವ ದೆಹಲಿ ಅಭಿವೃದ್ಧಿ ಖಾತೆ ಸಚಿವ ಗೋಪಾಲ್ ರಾಜ್ ರಾಯ್ ಅವರು, ಹಕ್ಕಿಗಳು ಮೃತಪಟ್ಟ ವರದಿ ಬಂದ ಹಿನ್ನಲೆಯಲ್ಲಿ ಸಭೆ ನಡೆಸಿ, ತಂಡಗಳನ್ನು ರಚಿಸಲಾಗಿದೆ. ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮೃತ ಹಕ್ಕಿಗಳ ಪರೀಕ್ಷೆ ನಡೆಸಿದ್ದು, ರೋಗ ಹರಡದಂತೆ ಮುನ್ನೆಚ್ಚರಿಕೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...