alex Certify
ಕನ್ನಡ ದುನಿಯಾ       Mobile App
       

Kannada Duniya

ಬಾಬಾ ರಾಮ್ ದೇವ್ ಕಂಪನಿಗೆ ಬಿತ್ತು ಫೈನ್

baba-ramdev-77658ಇತರೆ ಕಂಪನಿಗಳ ಉತ್ಪನ್ನಗಳನ್ನು ತಮ್ಮ ಕಂಪನಿಯದ್ದೆಂದು ಬಿಂಬಿಸಿರುವುದು, ಗ್ರಾಹಕರನ್ನು ದಿಕ್ಕು ತಪ್ಪಿಸುವ ಜಾಹೀರಾತು ಪ್ರಕಟಿಸಿರುವುದಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮ್ ದೇವ್ ಅವರ ಪತಂಜಲಿ ಆಯುರ್ವೇದ ಲಿಮಿಟೆಡ್ ಕಂಪನಿಗೆ ಹರಿದ್ವಾರದ ಜಿಲ್ಲಾ ನ್ಯಾಯಾಲಯ 11 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಹರಿದ್ವಾರದ ಅಡಿಷನಲ್ ಡಿಸ್ಟ್ರಿಕ್ಟ್ ಮ್ಯಾಜಿಸ್ಟ್ರೇಟ್ ಲಲಿತ್ ನರೇನ್ ಮಿಶ್ರಾ ಅವರಿದ್ದ ಪೀಠ ಈ ತೀರ್ಪು ನೀಡಿದ್ದು, ಒಂದು ತಿಂಗಳೊಳಗಾಗಿ ದಂಡವನ್ನು ಪಾವತಿಸುವಂತೆ ಆದೇಶಿಸಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಇದು ಮರುಕಳಿಸದಂತೆ ನಿಗಾ ವಹಿಸಬೇಕೆಂದು ಜಿಲ್ಲಾ ಆಹಾರ ನಿಯಂತ್ರಕರಿಗೆ ಸೂಚಿಸಿದೆ.

ಬರುವ ಆರ್ಥಿಕ ವರ್ಷದಲ್ಲಿ 5000 ಕೋಟಿ ರೂ. ಗಳಿಂದ 10 ಸಾವಿರ ಕೋಟಿ ರೂಪಾಯಿಗಳಿಗೆ ತನ್ನ ವ್ಯವಹಾರವನ್ನು ವಿಸ್ತರಿಸುವ ಉದ್ದೇಶ ಹೊಂದಿರುವ ಪತಂಜಲಿ ಆಯುರ್ವೇದ ಲಿಮಿಟೆಡ್ ಕಂಪನಿಗೆ ಈ ತೀರ್ಪು ಕೊಂಚ ಹಿನ್ನಡೆಯನ್ನುಂಟು ಮಾಡಿದೆ. 2012 ರಲ್ಲಿ ಈ ಪ್ರಕರಣ ದಾಖಲಾಗಿದ್ದು, ಡಿಸೆಂಬರ್ 1 ರಂದೇ ತೀರ್ಪು ಹೊರ ಬಿದ್ದಿದ್ದರೂ ಅದು ಈಗ ಬಹಿರಂಗವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...