alex Certify
ಕನ್ನಡ ದುನಿಯಾ       Mobile App
       

Kannada Duniya

ತೀವ್ರ ಹೃದಯಾಘಾತದಿಂದ ಕೇಂದ್ರದ ಮಾಜಿ ಸಚಿವ ಬಂಡಾರು ದತ್ತಾತ್ರೇಯ ಪುತ್ರನ ಸಾವು

ಹಿರಿಯ ಬಿಜೆಪಿ ನಾಯಕ ಹಾಗೂ ಕೇಂದ್ರದ ಮಾಜಿ ಸಚಿವ ಬಂಡಾರು ದತ್ತಾತ್ರೇಯರವರ ಪುತ್ರ ಬಂಡಾರು ವೈಷ್ಣವ್ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತೃತೀಯ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದ 21 ವರ್ಷದ ಬಂಡಾರು ವೈಷ್ಣವ್, ಹೈದರಾಬಾದಿನ ರಾಮನಗರದಲ್ಲಿರುವ ತಮ್ಮ ನಿವಾಸದಲ್ಲಿ ಕಳೆದ ರಾತ್ರಿ ಕುಟುಂಬ ಸದಸ್ಯರೊಂದಿಗೆ ಊಟ ಮಾಡುತ್ತಿದ್ದಾಗಲೇ ಹೃದಯಾಘಾತಕ್ಕೊಳಗಾಗಿದ್ದರು.

ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದ ವೈಷ್ಣವ್ ಅವರನ್ನು ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಗಿನ ಜಾವ 12-30 ರ ಸುಮಾರಿಗೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಬಂಡಾರು ವೈಷ್ಣವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಬಿಜೆಪಿ ರಾಜ್ಯಾಧ್ಯಕ್ಷ ಕೆ. ಲಕ್ಷ್ಮಣ್ ಸೇರಿದಂತೆ ಹಲವು ಬಿಜೆಪಿ ನಾಯಕರು ಆಸ್ಪತ್ರೆಗೆ ದೌಡಾಯಿಸಿದರು. ಬಂಡಾರು ದತ್ತಾತ್ರೇಯ ಅವರು ಹೃದ್ರೋಗಿಯಾಗಿರುವ ಹಿನ್ನೆಲೆಯಲ್ಲಿ ಪುತ್ರನ ಸಾವಿನ ವಿಚಾರವನ್ನು ಅವರಿಗೆ ಇಂದು ಬೆಳಗ್ಗೆ ತಿಳಿಸಲಾಗಿದೆ. ವೈಷ್ಣವ್ ಅವರ ಹಠಾತ್ ನಿಧನದಿಂದ ಕುಟುಂಬ ಸದಸ್ಯರು ತೀವ್ರ ಆಘಾತಕ್ಕೊಳಗಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...