alex Certify
ಕನ್ನಡ ದುನಿಯಾ       Mobile App
       

Kannada Duniya

ಕನ್ನಡದಲ್ಲಿ ನಿರ್ಮಲಾ ಸೀತಾರಾಮನ್ ಪ್ರಮಾಣ

sitharaman-

ನವದೆಹಲಿ: ಸಂಸತ್ ಮುಂಗಾರು ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಮೊದಲ ದಿನ ಗಣ್ಯರ ನಿಧನಕ್ಕೆ ಸಂತಾಪ ಸೂಚಿಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಅವರು, ಸಂಪುಟದ ನೂತನ ಸದಸ್ಯರನ್ನು ಸದನಕ್ಕೆ ಪರಿಚಯಿಸಿದ್ದಾರೆ.

ರಾಜ್ಯಸಭೆಯಲ್ಲಿ ಸದಸ್ಯರು ಪ್ರಮಾಣವಚನ ಸ್ವೀಕರಿಸಿದರು. ಪುನರಾಯ್ಕೆಯಾಗಿರುವ ಸಚಿವರಾದ ವೆಂಕಯ್ಯ ನಾಯ್ಡು, ಪಿಯೂಶ್ ಗೋಯೆಲ್, ನಿರ್ಮಲಾ ಸೀತಾರಾಮನ್, ಮಾಜಿ ಸಚಿವ ಪಿ.ಚಿದಂಬರಂ, ಸಮಾಜವಾದಿ ಪಕ್ಷದ ಮುಖಂಡ ಅಮರ್ ಸಿಂಗ್ ಮೊದಲಾದವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಪ್ರಮಾಣ ಸ್ವೀಕರಿಸಿದ ಬಹುತೇಕ ಸದಸ್ಯರು ತಾವು ಆಯ್ಕೆಯಾಗಿರುವ ರಾಜ್ಯಗಳ ಪ್ರಾದೇಶಿಕ ಭಾಷೆಯಲ್ಲಿ ಪ್ರಮಾಣ ಸ್ವೀಕರಿಸಿದ್ದು, ವಿಶೇಷವಾಗಿತ್ತು. ಸಂಜಯ್ ರಾವತ್ ಮರಾಠಿಯಲ್ಲಿ ಪ್ರಮಾಣ ಸ್ವೀಕರಿಸಿದ್ದಾರೆ.

ಅದೇ ರೀತಿ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಲ್ಲದೇ ಕೆಲ ಸದಸ್ಯರು ಪಂಜಾಬಿ, ಒಡಿಸ್ಸಿ, ತಮಿಳು ಹಾಗೂ ಸಂಸ್ಕೃತ ಭಾಷೆಯಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕರ್ನಾಟಕದಿಂದ ಈ ಹಿಂದೆ ವೆಂಕಯ್ಯನಾಯ್ಡು ಅವರು ಆಯ್ಕೆಯಾಗಿದ್ದರು. ಈ ಬಾರಿ ಅವರ ಸ್ಪರ್ಧೆಗೆ ವಿರೋಧ ವ್ಯಕ್ತವಾಗಿ ಆನ್ ಲೈನ್ ನಲ್ಲಿ ವೆಂಕಯ್ಯ ಸಾಕಯ್ಯ ಅಭಿಯಾನ ನಡೆಸಲಾಗಿತ್ತು. ಆ ನಂತರದಲ್ಲಿ ವೆಂಕಯ್ಯ ನಾಯ್ಡು ಅವರ ಬದಲಿಗೆ ನಿರ್ಮಲಾ ಸೀತಾರಾಮನ್ ಅಭ್ಯರ್ಥಿಯಾಗಿದ್ದರು. ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರು ಕನ್ನಡ ಕಲಿಯುವ ಬಗ್ಗೆ ಹೇಳಿಕೊಂಡಿದ್ದರು. ಇದೀಗ ಅವರು ಕನ್ನಡದಲ್ಲಿಯೇ ರಾಜ್ಯಸಭೆ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...