alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರತಿಭಟನಾನಿರತ ಇಬ್ಬರು ಸಾವು

w-bpro

ಕೋಲ್ಕತಾ: ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆಯ, ಸಿಂಗೂರ್ ನಂದಿಗ್ರಾಮದಲ್ಲಿ ವಿದ್ಯುತ್ ಉಪಕೇಂದ್ರ ನಿರ್ಮಾಣ ವಿರೋಧಿಸಿ, ನಡೆದ ಪ್ರತಿಭಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ವಿದ್ಯುತ್ ಉಪಕೇಂದ್ರ ನಿರ್ಮಾಣಕ್ಕೆ ಜಮೀನು ನೀಡಲು ನಿರಾಕರಿಸಿ, ಗ್ರಾಮಸ್ಥರು ಪ್ರತಿಭಟನೆ ಹಮ್ಮಿಕೊಂಡಿದ್ದು, ಪೊಲೀಸರ ಮೇಲೆ ಕಲ್ಲು ತೂರಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ, ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, ಇಬ್ಬರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ.

ಪ್ರಾಣ ಕೊಟ್ಟೇವು, ಭೂಮಿ ಕೊಡಲ್ಲ ಎಂದು ರೈತರು ಹೇಳಿದ್ದು, ಗ್ರಾಮದ ಬಳಿ ವಿದ್ಯುತ್ ಉಪಕೇಂದ್ರ ನಿರ್ಮಿಸಬಾರದೆಂದು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...