alex Certify
ಕನ್ನಡ ದುನಿಯಾ       Mobile App
       

Kannada Duniya

ಹಿಂಸಾಚಾರಕ್ಕೆ 10 ಮಂದಿ ಬಲಿ, ಮುಚ್ಚಿದ ಶಾಲಾ–ಕಾಲೇಜು

ನವದೆಹಲಿ: ಪರಿಶಿಷ್ಟ ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು, ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ವಿರೋಧಿಸಿ, ದಲಿತ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಹಿಂಸಾಚಾರಕ್ಕೆ ತಿರುಗಿ ಕನಿಷ್ಠ 10 ಮಂದಿ ಬಲಿಯಾಗಿದ್ದಾರೆ.

ಭಾರತ್ ಬಂದ್ ವೇಳೆ ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ತಾನ, ಮಹಾರಾಷ್ಟ್ರ, ಪಂಜಾಬ್ ಮೊದಲಾದ ರಾಜ್ಯಗಳಲ್ಲಿ ಹಿಂಸಾಚಾರ ನಡೆದಿದೆ. ಉತ್ತರ ಪ್ರದೇಶದಲ್ಲಿ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಮಂಗಳವಾರವೂ ಆಗ್ರಾ, ಗಾಜಿಯಾಬಾದ್, ಹಾಪುರ್ ಮೊದಲಾದ ಕಡೆಗಳಲ್ಲಿ ತರಗತಿ ನಡೆಸಲಾಗುವುದಿಲ್ಲ. ಬೋರ್ಡ್ ಪರೀಕ್ಷೆಗಳು ನಿಗದಿಯಂತೆಯೇ ನಡೆಯಲಿವೆ.

ಹಿಂಸಾಚಾರದಲ್ಲಿ ಅಪಾರ ಸಂಖ್ಯೆಯ ಜನ ಗಾಯಗೊಂಡಿದ್ದು, ಭಾರೀ ಪ್ರಮಾಣದ ನಷ್ಟವಾಗಿದೆ. ಇನ್ನು ಎಸ್.ಸಿ., ಎಸ್.ಟಿ. ಕಾಯ್ದೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲಿಸಬೇಕೆಂದು ಕೋರಿ ಕೇಂದ್ರ ಸರ್ಕಾರ ಅರ್ಜಿ ಸಲ್ಲಿಸಿದೆ.

ಇನ್ನೂ ಅನೇಕ ರಾಜ್ಯಗಳಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದು, ಹೆಚ್ಚಿನ ಪೊಲೀಸರು, ಸೇನಾಪಡೆಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...