alex Certify ಭಾರತ್ ಬಂದ್: ನಾಳೆಯಿಂದ 2 ದಿನ ದೇಶಾದ್ಯಂತ ಮುಷ್ಕರ, ಬ್ಯಾಂಕ್ ಸೇರಿ ಹಲವು ಸೇವೆ ವ್ಯತ್ಯಯ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರತ್ ಬಂದ್: ನಾಳೆಯಿಂದ 2 ದಿನ ದೇಶಾದ್ಯಂತ ಮುಷ್ಕರ, ಬ್ಯಾಂಕ್ ಸೇರಿ ಹಲವು ಸೇವೆ ವ್ಯತ್ಯಯ ಸಾಧ್ಯತೆ

ನವದೆಹಲಿ: ಕಾರ್ಮಿಕರ ಮೇಲೆ ಪರಿಣಾಮ ಬೀರುವ ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಸೋಮವಾರ ಮತ್ತು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಬ್ಯಾಂಕಿಂಗ್ ವಲಯವು ಮುಷ್ಕರದಲ್ಲಿ ಪಾಲ್ಗೊಳ್ಳಲಿದೆ ಎಂದು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ ತಿಳಿಸಿದೆ.

ಮಾರ್ಚ್ 22, 2022 ರಂದು ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆಯ ಸಭೆಯ ನಂತರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಲಾಯಿತು. ಕಾರ್ಮಿಕ, ರೈತ ವಿರೋಧಿ, ಜನವಿರೋಧಿ ಮತ್ತು ರಾಷ್ಟ್ರವಿರೋಧಿ ನೀತಿಗಳ ವಿರುದ್ಧ ಒಕ್ಕೂಟಗಳು ಎರಡು ದಿನಗಳ ಅಖಿಲ ಭಾರತ ಮುಷ್ಕರವನ್ನು ಘೋಷಿಸಿವೆ.

ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯೋಜನೆ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಮುಷ್ಕರದಲ್ಲಿ ಭಾಗವಹಿಸುತ್ತಿವೆ.

ಮಾರ್ಚ್ 28 ಮತ್ತು 29 ರಂದು ಬ್ಯಾಂಕಿಂಗ್ ಸೇವೆಗಳ ಮೇಲೆ ಪರಿಣಾಮ ಬೀರಬಹುದು ಎಂದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸೇರಿದಂತೆ ಅನೇಕ ಬ್ಯಾಂಕ್ ಗಳು ಗ್ರಾಹಕರಿಗೆ ಮಾಹಿತಿ ನೀಡಿವೆ.

ಕಲ್ಲಿದ್ದಲು, ಉಕ್ಕು, ತೈಲ, ಟೆಲಿಕಾಂ, ಅಂಚೆ, ಆದಾಯ ತೆರಿಗೆ, ತಾಮ್ರ ಮತ್ತು ವಿಮೆಯಂತಹ ವಿವಿಧ ಕ್ಷೇತ್ರಗಳ ಕಾರ್ಮಿಕರು ಮುಷ್ಕರದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ರೈಲ್ವೇ ಮತ್ತು ರಕ್ಷಣಾ ವಲಯದ ಒಕ್ಕೂಟಗಳು ದೇಶದಾದ್ಯಂತ ಮುಷ್ಕರ ಬೆಂಬಲಿಸಲು ಮುಂದಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...