alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಕಷ್ಟಕ್ಕೆ ಸಿಲುಕಿದ ನವಜೋತ್ ಸಿಂಗ್ ಸಿದ್ದು

ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರದಲ್ಲಿ ಪ್ರವಾಸೋದ್ಯಮ ಸಚಿವರಾಗಿರುವ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿದ್ದು, ಸ್ವಪಕ್ಷದ ಸರ್ಕಾರದಿಂದಲೇ ಸಂಕಷ್ಟಕ್ಕೆ ಒಳಗಾಗಿದ್ದಾರೆ. 1988 ರಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಹತ್ಯೆ ಪ್ರಕರಣದಲ್ಲಿ ಸಿದ್ದು ಅವರನ್ನು ಶಿಕ್ಷೆಗೆ ಗುರಿಪಡಿಸುವಂತೆ ಪಂಜಾಬ್ ಸರ್ಕಾರದ ವಕೀಲರು, ಸುಪ್ರೀಂ ಕೋರ್ಟ್ ನಲ್ಲಿ ಮನವಿ ಮಾಡಿದ್ದಾರೆ.

ಡಿಸೆಂಬರ್ 27,1988 ರಂದು ನವಜೋತ್ ಸಿಂಗ್ ಸಿದ್ದು ಪಟಿಯಾಲದಲ್ಲಿ ತಮ್ಮ ಸ್ನೇಹಿತ ರೂಪಿಂದರ್ ಸಿಂಗ್ ಸಂಧು ಎಂಬವರೊಂದಿಗೆ ವಾಹನದಲ್ಲಿ ಹೋಗುತ್ತಿದ್ದಾಗ 65 ವರ್ಷದ ಗುರ್ನಾಮ್ ಸಿಂಗ್ ಜೊತೆ ವಾಗ್ವಾದ ನಡೆದಿತ್ತು. ಈ ಹಂತದಲ್ಲಿ ಸಿದ್ದು ಮತ್ತವರ ಸ್ನೇಹಿತ, ಗುರ್ನಾಮ್ ಸಿಂಗ್ ರನ್ನು ಥಳಿಸಿದ್ದರೆನ್ನಲಾಗಿದ್ದು, ಬಳಿಕ ಅವರು ಮೃತಪಟ್ಟಿದ್ದರು.

ಪ್ರಕರಣದ ವಿಚಾರಣೆ ಸ್ಥಳೀಯ ನ್ಯಾಯಾಲಯದಲ್ಲಿ ನಡೆದಿದ್ದು, 1999 ರ ಸೆಪ್ಟೆಂಬರ್ ನಲ್ಲಿ ಸಿದ್ದು ನಿರ್ದೋಷಿಯೆಂದು ಬಿಡುಗಡೆಗೊಂಡಿದ್ದರು. ಬಳಿಕ ಹೈಕೋರ್ಟ್ ನಲ್ಲಿ ಈ ತೀರ್ಪನ್ನು ಪ್ರಶ್ನಿಸಿದ್ದು, ಸಿದ್ದು ಮತ್ತವರ ಸ್ನೇಹಿತನಿಗೆ ಮೂರು ವರ್ಷ ಜೈಲು ಶಿಕ್ಷೆ ಹಾಗೂ ತಲಾ 1 ಲಕ್ಷ ರೂ. ದಂಡ ವಿಧಿಸಲಾಗಿತ್ತು. ಸುಪ್ರೀಂ ಕೋರ್ಟ್ ನಿಂದ ಜಾಮೀನು ಪಡೆದುಕೊಂಡಿದ್ದ ಸಿದ್ದು, ಶಿಕ್ಷೆಗೆ ತಡೆಯಾಜ್ಞೆ ತಂದಿದ್ದರು. ಇದೀಗ ಹೈಕೋರ್ಟ್ ತೀರ್ಪನ್ನು ಎತ್ತಿ ಹಿಡಿಯುವಂತೆ ಪಂಜಾಬ್ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಮನವಿ ಸಲ್ಲಿಸಿದ್ದು, ಸಿದ್ದು ಸಂಕಷ್ಟಕ್ಕೆ ಒಳಗಾಗುವಂತೆ ಮಾಡಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...