alex Certify
ಕನ್ನಡ ದುನಿಯಾ       Mobile App
       

Kannada Duniya

ಮಾವಿನ ಹಣ್ಣು ಕಿತ್ತ ಬಾಲಕನಿಗೆ ಘನಘೋರ ಶಿಕ್ಷೆ

ಬಿಹಾರದ ಖಗಡಿಯಾದಲ್ಲಿ ಮನಕಲಕುವ ಘಟನೆ ನಡೆದಿದೆ. ತೋಟದಲ್ಲಿದ್ದ ಮಾವಿನ ಹಣ್ಣನ್ನು ಕಿತ್ತಿದ್ದು 10 ವರ್ಷದ ಬಾಲಕನ ಪ್ರಾಣಕ್ಕೆ ಕುತ್ತು ತಂದಿದೆ. ಮಾವಿನ ಹಣ್ಣು ಕಿತ್ತಿದ್ದಾನೆಂಬ ಕ್ಷುಲಕ ಕಾರಣಕ್ಕೆ ಬಾಲಕ ತಲೆಗೆ ಗುಂಡು ಹಾರಿಸಿ ಕೊಲೆ ಮಾಡಲಾಗಿದೆ.

ಘಟನೆ ಗೋಗ್ರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗೋಗ್ರಾ ಸರ್ಕಾರಿ ಆಸ್ಪತ್ರೆಗೆ ಮೃತ ದೇಹವನ್ನು ಸಾಗಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ಶುರು ಮಾಡಿದ್ದಾರೆ. ಘಟನೆ ನಂತ್ರ ಆರೋಪಿ ಹಾಗೂ ಆತನ ಕುಟುಂಬಸ್ಥರು ಊರು ಬಿಟ್ಟಿದ್ದಾರೆ.

ಬಿಹಾರದಲ್ಲಿ ಇಂಥ ಘಟನೆಗಳು ನಡೆಯುತ್ತಿರುತ್ತವೆ. ಕೆಲ ವರ್ಷಗಳ ಹಿಂದೆ ಕ್ಷುಲ್ಲಕ ಕಾರಣಕ್ಕೆ 10 ವರ್ಷದ ಬಾಲಕನಿಗೆ ಇಬ್ಬರು ಹೊಡೆದು ಕೊಲೆ ಮಾಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...