alex Certify
ಕನ್ನಡ ದುನಿಯಾ       Mobile App
       

Kannada Duniya

ಸಾವು ಗೆದ್ದು ಬಂದ ಮೂರು ವರ್ಷದ ಬಾಲಕಿ

110 ಅಡಿ ಆಳದ ತೆರೆದ ಕೊಳವೆ ಬಾವಿಗೆ ಬಿದ್ದಿದ್ದ ಬಿಹಾರದ ಮೂರು ವರ್ಷದ ಬಾಲಕಿ ಸನಾಳನ್ನು ರಕ್ಷಣೆ ಮಾಡುವಲ್ಲಿ ಎನ್​ಡಿಆರ್ಎಫ್​ ತಂಡ ಯಶಸ್ವಿಯಾಗಿದೆ.

ಪೋಷಕರೊಂದಿಗೆ ಮುಂಗೇರಾದ ಮುರ್ಗಿಚಕ್ ನಲ್ಲಿರುವ ಅಜ್ಜನ ಮನೆಗೆ ಬಂದಿದ್ದ ಬಾಲಕಿ ಸನಾ ಮಂಗಳವಾರ ಸಂಜೆ ಆಟವಾಡುತ್ತ ಮನೆ ಬಳಿಯೇ ಇದ್ದ 110 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿದ್ದಳು. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಹಾಗೂ ರಾಷ್ಟ್ರಿಯ ವಿಪತ್ತು ನಿರ್ವಹಣಾ ತಂಡ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯವನ್ನು ಆರಂಭಿಸಿತ್ತು. ಸತತ 30 ಗಂಟೆಗಳ ಕಾರ್ಯಾಚರಣೆ ಬಳಿಕ ಬಾಲಕಿಯನ್ನು ರಕ್ಷಣೆ ಮಾಡಲಾಗಿದೆ.

ಬಾವಿಯಲ್ಲಿ 40 ಅಡಿ ಆಳದಲ್ಲಿ ಸನಾ ಸಿಲುಕಿಕೊಂಡಿದ್ದಳು. ಕಾರ್ಯಾಚರಣೆ ವೇಳೆ ರಕ್ಷಣಾ ತಂಡ ಬಾಲಕಿ ಉಸಿರಾಟಕ್ಕೆ ಆಮ್ಲಜನಕವನ್ನು ಪೂರೈಸಿ, ಬಾಲಕಿಯು ಇನ್ನೂ ಕೆಳಗೆ ಕುಸಿಯದಂತೆ ಮುಂಜಾಗ್ರತೆ ವಹಿಸಿತ್ತು. ಕೊಳವೆ ಬಾವಿಯ ಪಕ್ಕದಲ್ಲಿ ಜೆಸಿಬಿ ಯಂತ್ರಗಳ ಸಹಾಯದಿಂದ ಹೊಂಡ ನಿರ್ಮಿಸಿ ಬಾಲಕಿಯನ್ನು ಸುರಕ್ಷಿತವಾಗಿ ಹೊರತೆಗೆಯಲಾಗಿದೆ.

ಬಾಲಕಿ ಆರೋಗ್ಯ ಪರಿಶೀಲಿಸಿದ ವೈದ್ಯರು ಸನಾ ಆರೋಗ್ಯದಿಂದಿದ್ದಾಳೆ ಎಂದು ತಿಳಿಸಿದ್ದಾರೆ. 110 ಅಡಿ ಆಳದ ಬಾವಿಗೆ ಬಿದ್ದಿದ್ದ ಸನಾ ಜೀವನ್ಮರಣದ ನಡುವೆ ಹೋರಾಟ ನಡೆಸಿ ಕೊನೆಗೂ ಸಾವು ಗೆದ್ದು ಬಂದಿದ್ದಾಳೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...