alex Certify
ಕನ್ನಡ ದುನಿಯಾ       Mobile App
       

Kannada Duniya

ವಿಷಯುಕ್ತ ಮದ್ಯಕ್ಕೆ ಐದು ಮಂದಿ ಬಲಿ

ಬಿಹಾರದ ರೋಹ್ಟಾಸ್ ಜಿಲ್ಲೆಯ ದನ್ವಾರ್ ಗ್ರಾಮದಲ್ಲಿ ವಿಷಯುಕ್ತ ಅಕ್ರಮ ಮದ್ಯ ಸೇವಿಸಿ ಐದು ಮಂದಿ ಸಾವನ್ನಪ್ಪಿದ್ದಾರೆ. ನಾಲ್ವರ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಯಲ್ಲಿ ಜೀವನ್ಮರಣದ ಮಧ್ಯೆ ಹೋರಾಡುತ್ತಿದ್ದಾರೆ.

ಬಿಹಾರ್ ನಲ್ಲಿ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಆದ್ರೆ ಅಕ್ರಮ ಮದ್ಯ ಮಾರಾಟ ದಂಧೆ ನಡೆಯುತ್ತಿದೆ. ಅಕ್ರಮ ಮದ್ಯ ಸೇವನೆ ಮಾಡಿ ಈಗ ಐದು ಮಂದಿ ಸಾವನ್ನಪ್ಪಿದ್ದಾರೆ. ಮದ್ಯ ಮಾರಾಟ ನಿಷೇಧದ ನಂತ್ರ ಇದು ಎರಡನೇ ಪ್ರಕರಣವಾಗಿದೆ.

ಹಿಂದಿನ ವರ್ಷ ಆಗಸ್ಟ್ ನಲ್ಲಿ ವಿಷಯುಕ್ತ ಮದ್ಯ ಸೇವನೆ ಮಾಡಿ 13 ಮಂದಿ ಸಾವನ್ನಪ್ಪಿದ್ದರು. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆ ಬಗ್ಗೆ ಸೂಕ್ತ ತನಿಖೆಗೆ ಆದೇಶ ನೀಡಲಾಗಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...