alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಹಾರದಲ್ಲಿ ಬಸ್ ಕೆರೆಗುರುಳಿ 50 ಮಂದಿ ದುರ್ಮರಣ ?

bus

ಬಿಹಾರದ ಮಧುಬನಿ ಜಿಲ್ಲೆಯಲ್ಲಿ ಬಸ್ಸೊಂದು ಕೆರೆಗುರುಳಿದೆ. ಇಂದು ಮಧ್ಯಾಹ್ನ ಸಂಭವಿಸಿದ ದುರ್ಘಟನೆಯಲ್ಲಿ 50 ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಮೂವರು ಪ್ರಯಾಣಿಕರನ್ನು ರಕ್ಷಿಸಲಾಗಿದೆ. ರಕ್ಷಣಾ ಪಡೆ ಸ್ಥಳಕ್ಕಾಗಮಿಸಿದ್ದು ಮಹಿಳೆ ಸೇರಿದಂತೆ ನಾಲ್ವರ ಮೃತ ದೇಹವನ್ನು ಹೊರತೆಗೆಯಲಾಗಿದೆ. ಬಸ್ ನಲ್ಲಿ 55 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ಬಸ್ ಕೆರೆಗುರುಳಿದೆ. 25 ಅಡಿ ಆಳದ ಕೆರೆಗೆ ಬಸ್ ಬಿದ್ದಿದೆ ಎನ್ನಲಾಗ್ತಾ ಇದೆ. ಘಟನೆ ನಡೆದ ತಕ್ಷಣ ಸ್ಥಳಕ್ಕೆ ಪೊಲೀಸರು ಬರಲಿಲ್ಲ ಎಂದು ಆರೋಪಿಸಿರುವ ಸ್ಥಳೀಯರು ಕಲ್ಲು ಹಾಗೂ ಚಪ್ಪಲಿ ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾಕಾರರಿಂದ ತಪ್ಪಿಸಿಕೊಳ್ಳಲು ಪೊಲೀಸರು ಹರಸಾಹಸಪಡ್ತಿದ್ದಾರೆ. ಮನೆ, ಗುಪ್ತ ಸ್ಥಳಗಳಲ್ಲಿ ಅಡಗಿ ಕುಳಿತಿದ್ದಾರೆ. ಸ್ಥಳಕ್ಕೆ ಬಂದ ಆ್ಯಂಬುಲೆನ್ಸ್ ಗೂ ಹಾನಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...