alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ ಗೆ ಬೆಂಕಿ ತಗುಲಿ 8 ಮಂದಿ ಸಜೀವ ದಹನ

bihar-bus-f

ಪಾಟ್ನಾ: ಬಿಹಾರದ ನಳಂದ ಜಿಲ್ಲೆಯಲ್ಲಿ ಚಲಿಸುತ್ತಿದ್ದ ಬಸ್ ಗೆ ಬೆಂಕಿ ತಗುಲಿ 8 ಮಂದಿ ಸಜೀವ ದಹನವಾಗಿದ್ದಾರೆ.

ಶೇಖ್ ಪುರದಿಂದ ಪಾಟ್ನಾಕ್ಕೆ ತೆರಳುತ್ತಿದ್ದ ಬಸ್, ಹನೌತ್ ಬಜಾರ್ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲಿ ಇಡೀ ಬಸ್ ಗೆ ವ್ಯಾಪಿಸಿದೆ.

ಸ್ಥಳೀಯರು ಬಸ್ ನಲ್ಲಿದ್ದವರನ್ನು ರಕ್ಷಿಸುವ ಪ್ರಯತ್ನ ನಡೆಸಿದರೂ, ಕೆಲವೇ ಕ್ಷಣದಲ್ಲಿ ಬಸ್ ಗೆ ಬೆಂಕಿ ಆವರಿಸಿ ನೋಡನೋಡುತ್ತಿದ್ದಂತೆ ಹೊತ್ತಿ ಉರಿದಿದೆ.

11 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಬಾಳೆಹಣ್ಣು, ಮಾವಿನಕಾಯಿಗಳನ್ನು ಕೃತಕವಾಗಿ ಹಣ್ಣಾಗಿಸುವ ದಹನಶೀಲ ವಸ್ತುಗಳನ್ನು ಬಸ್ ನಲ್ಲಿ ಕೊಂಡೊಯ್ಯಲಾಗುತ್ತಿತ್ತು.ಅದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಬಸ್ ಹೊತ್ತಿ ಉರಿದಿದೆ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಮೃತರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...