alex Certify
ಕನ್ನಡ ದುನಿಯಾ       Mobile App
       

Kannada Duniya

ಅಟಲ್ ಕುರಿತು ವಿವಾದಾತ್ಮಕ ಟ್ವೀಟ್ ಮಾಡಿದ್ದಕ್ಕೆ ಪ್ರಾಧ್ಯಾಪಕರ ಮೇಲೆ ಹಲ್ಲೆ

ಮೋತಿಹಾರಿ: ಅಟಲ್ ಬಿಹಾರಿ ವಾಜಪೇಯಿ ನಿಧನ ಸಂದರ್ಭದಲ್ಲಿ ವಿವಾದಾತ್ಮಕ ಟ್ವೀಟ್ ಮಾಡಿದ ಬಿಹಾರದ ಮೋತಿಹಾರಿ ಜಿಲ್ಲೆ ಸೆಂಟ್ರಲ್ ವಿಶ್ವವಿದ್ಯಾಲಯ ಸಹಾಯಕ ಪ್ರಾಧ್ಯಾಪಕರ ಮೇಲೆ ಗುಂಪೊಂದು ಹಲ್ಲೆ ಮಾಡಿದೆ.

ವಿಶ್ವ ವಿದ್ಯಾಲಯದ ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಸಂಜಯ್ ಕುಮಾರ್ ಅವರು ಅಟಲ್ ಬಗ್ಗೆ ವಿವಾದಾತ್ಮಕ ಟ್ವೀಟ್ ಮಾಡಿದ್ದು. ಹಲ್ಲೆ ಹಿನ್ನೆಲೆ 12 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಸಂಜಯ್ ಕುಮಾರ್ ಅವರನ್ನು ಪಾಟ್ನಾದ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲ್ಲೆ ನಡೆಸುವ ಸಂದರ್ಭದಲ್ಲಿ ನೀನು ಮತ್ತೊಬ್ಬ ಕನ್ಹಯ್ಯ ಕುಮಾರ್ ಆಗಲು ಹೊರಟಿದ್ದೀಯ ಎಂದು ಗುಂಪಿನಲ್ಲಿದ್ದವರು ದಬಾಯಿಸಿದ್ದಾರೆಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...