alex Certify
ಕನ್ನಡ ದುನಿಯಾ       Mobile App
       

Kannada Duniya

ಬಿಹಾರ ಪ್ರವಾಹ : ಸೇನೆ ನೆರವು ಕೇಳಿದ ಸಿಎಂ

flood_bihar-jpg_1502618032_618x347

ಪ್ರವಾಹದಿಂದಾಗಿ ಬಿಹಾರದ ಪರಿಸ್ಥಿತಿ ಗಂಭೀರವಾಗಿದೆ. ಅರಾರಿಯಾ, ಕತಿಹಾರ್ ಹಾಗೂ ಪೂರ್ಣಿಯಾ ಪ್ರದೇಶ ಜಲಾವೃತಗೊಂಡಿದೆ. ಉತ್ತರ ಬಿಹಾರ ಹಾಗೂ ನೇಪಾಳದ ಕೆಲ ಪ್ರದೇಶಗಳಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಭಾರೀ ಮಳೆಯಾಗ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ.

ಮನೆಗಳ ಒಳಗೆ ನೀರು ತುಂಬಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಂಗಡಿ, ಕಾರುಗಳು ನೀರಿನಲ್ಲಿ ಮುಳುಗಿದ್ದು, ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ಅನೇಕರು ಮನೆಯಲ್ಲಿಯೇ ಉಳಿದಿದ್ದು, ಎಸ್ ಡಿ ಆರ್ ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ನಿರತವಾಗಿದೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಪರಿಸ್ಥಿತಿಯ ಅವಲೋಕನ ಮಾಡಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ, ರಾಜನಾಥ್ ಸಿಂಗ್ ಹಾಗೂ ಅರುಣ್ ಜೇಟ್ಲಿಗೆ ಕರೆ ಮಾಡಿ ಪರಿಸ್ಥಿತಿ ಬಗ್ಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ವಾಯುಪಡೆ ಹಾಗೂ ಸೇನೆಯ ನೆರವು ಕೋರಿದ್ದಾರೆ. ರಕ್ಷಣೆಗಾಗಿ ಹೆಲಿಕಾಪ್ಟರ್ ನೀಡುವಂತೆ ವಿನಂತಿಸಿಕೊಂಡಿದ್ದಾರೆ.

ಕಳೆದ 72 ಗಂಟೆಗಳಿಂದ ನಿರಂತರವಾಗಿ ಮಳೆಯಾಗ್ತಿದ್ದು, ಇದ್ರಿಂದ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ. ಪ್ರವಾಹದಲ್ಲಿ ಸಿಲುಕಿರುವ ಜನರಿಗೆ ಆಹಾರ, ನೀರನ್ನು ನೀಡುವ ಪ್ರಯತ್ನ ನಡೆಯುತ್ತಿದೆ. ಸಾವಿರಾರು ಮಂದಿಯನ್ನು ಈಗಾಗ್ಲೇ ಸುರಕ್ಷಿತ ಸ್ಥಳಗಳಿಗೆ ರವಾನೆ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...