alex Certify
ಕನ್ನಡ ದುನಿಯಾ       Mobile App
       

Kannada Duniya

ಪುತ್ರಿ ಮೇಲೆ ತಂದೆಯಿಂದಲೇ ಲೈಂಗಿಕ ದೌರ್ಜನ್ಯ

ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೇತಿಯಾದಲ್ಲಿ ತಂದೆಯೇ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ನೊಂದ ಬಾಲಕಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಜೌಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 30 ವರ್ಷದ ಕಾಮುಕ ತನ್ನ 15 ವರ್ಷದ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದು, ಬಾಲಕಿಯ ತಾಯಿ ದೂರು ನೀಡಿದ್ದಾರೆ.

ತಂದೆಯಿಂದ ದೌರ್ಜನ್ಯಕ್ಕೊಳಗಾದ ಬಾಲಕಿ ಮತ್ತು ಆಕೆಯ ತಾಯಿ ಸ್ಥಳೀಯ ಮುಖಂಡರಿಗೆ ಮನವಿ ಮಾಡಿದ್ದ ಮೇರೆಗೆ ಪಂಚಾಯಿತಿ ನಡೆಸಲಾಗಿದೆ. ಇದಾದ ಬಳಿಕ ಮಾನಸಿಕವಾಗಿ ನೊಂದಿದ್ದ ಬಾಲಕಿ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಕಾಮುಕ ತಂದೆಯನ್ನು ಪೊಲೀಸರು ಬಂಧಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...